ರೇವಣ್ಣರನ್ನು ರಾವಣನಿಗೆ ಹೋಲಿಕೆ ಮಾಡಿದ ಶಾಸಕ ಎ.ಟಿ.ರಾಮಸ್ವಾಮಿ

ರೇವಣ್ಣರನ್ನು ರಾವಣನಿಗೆ ಹೋಲಿಕೆ ಮಾಡಿದ ಶಾಸಕ ಎ.ಟಿ.ರಾಮಸ್ವಾಮಿ

ಬೆಂಗಳೂರು:ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಇದೀಗ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ನಾಯಕರು ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಈ ವೇಳೆ ರಾಜಕೀಯ ನಾಯಕರ ವಾಕ್ಸಮರಗಳೂ ತಾರಕಕ್ಕೇರುತ್ತಿವೆ.

ಈಗ ಮಾಜಿ ಸಚಿವ ರೇವಣ್ಣ ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.ಎಚ್.ಡಿ.ರೇವಣ್ಣ ಅವರನ್ನು ರಾವಣನಿಗೆ ಹೋಲಿಕೆ ಮಾಡಿ ಶಾಸಕ ಎ.ಟಿ.ರಾಮಸ್ವಾಮಿ ಕಿಡಿಕಾರಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಾವಣನಿಗೆ ಸಕಲ ಐಶ್ವರ್ಯ ಇತ್ತು, ಈಶ್ವರನಿಂದ ಪಡೆದಂತಹ ಶಕ್ತಿಶಾಲಿ ಅಸ್ತ್ರಗಳಿದ್ದರೂ ಕೊನೆಗೆ ಅವನು ನಾಶವಾದನು. ಲಂಕೆನೂ ಕೂಡ ಬೂದಿ ಆಗಲಿಲ್ವಾ,ಹೀಗಾಗಿ ಯಾರೂ ಶಾಶ್ವತ ಅಲ್ಲ. ದೇವೇಗೌಡರನ್ನು ಇವರೆಲ್ಲ ಉತ್ಸವಮೂರ್ತಿ ಮಾಡಿಕೊಂಡಿದ್ದಾರೆ.

ಅಂತಹ ಮುತ್ಸದ್ದಿ ರಾಜಕಾರಣಿಯನ್ನು ಮೂಲೆಗುಂಪು ಮಾಡಿದ್ದಾರೆ. ಇವರು ಯಾರು ಅವರ ಮಾತಿಗೆ ಸ್ವಲ್ಪನೂ ಕಿಮ್ಮತ್ತು ಕೊಡುತ್ತಿಲ್ಲ ಎಂದು ಶಾಸಕ ಎ.ಟಿ.ರಾಮಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.