ರೈತರ ಖಾತೆಗೆ 6 ಸಾವಿರ ರೂ. ಜಮಾ: ಯೋಜನೆಗೆ ನೋಂದಾಯಿಸಲು ಕೃಷಿಕರಿಗೆ ಮಾಹಿತಿ
ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಪ್ರತಿ 4 ತಿಂಗಳಿಗೊಮ್ಮೆ ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಆದ್ದರಿಂದ ಇದುವರೆಗೆ ಹೆಸರು ನೋಂದಾಯಿಸಿಕೊಳ್ಳದ ರೈತರು ತಮ್ಮ ಆಧಾರ್ ಸಂಖ್ಯೆ, ಪಹಣಿ ವಿವರಗಳು ಹಾಗೂ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಯ ಬಾಪೂಜಿ ಸೇವಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರ ಅಥವಾ ಜನಸ್ನೇಹಿ ಕೇಂದ್ರಗಳಲ್ಲಿ ಸ್ವಯಂ ಘೋಷಣಾ ಪತ್ರದೊಂದಿಗೆ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕೋರಿದ್ದಾರೆ.
ಅನರ್ಹತೆಗಳು:
ನಿವೃತ್ತ/ ಹಾಲಿ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ/ ನೌಕರರು (ಗ್ರೂಪ್-ಡಿ ಹೊರತುಪಡಿಸಿ) 10 ಸಾವಿರ ರೂ. ಗಿಂತ ಹೆಚ್ಚಿನ ಮೊತ್ತ ಪಡೆಯುತ್ತಿರುವ ಪಿಂಚಣಿದಾರರು. ಆದಾಯ ತೆರಿಗೆ ಪಾವತಿದಾರರು. ವೃತ್ತಿಪರರು(ವೈದ್ಯರು, ಅಭಿಯಂತರರು, ವಕೀಲರು, ಮತ್ತು ಇತರೆ) ಮಾಜಿ ಮತ್ತು ಹಾಲಿ ಸಂವಿಧಾನಿಕ ಹುದ್ದೆ ಹೊಂದಿದವರು.