ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿ

ಬಳ್ಳಾರಿ : 2022-23ನೇ ಸಾಲಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲು ಬಳ್ಳಾರಿ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ ತೀರ್ಮಾನಿಸಿದೆ. ರಾಜ್ಯದಲ್ಲಿ ಇನ್ನು 2 ಲಕ್ಷ ಮೆಟ್ರಿಕ್ ಟನ್ ಜೋಳವನ್ನು ರೈತರಿಂದ ಖರೀದಿಸಲು ಸರ್ಕಾರ ಮುಂದಾಗಿದ್ದು, ಖರೀದಿ ಪ್ರಕ್ರಿಯೆಯಲ್ಲಿ ಖರೀದಿ ಮಿತಿಯು ಪ್ರತಿ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್‍ನಂತೆ ಗರಿಷ್ಠ 20 ಕ್ವಿಂಟಾಲ್ ಗರಿಷ್ಠ ಮಿತಿ ಇದ್ದು ಪ್ರಸ್ತುತ ಖರೀದಿ ಮಿತಿಯನ್ನು ತೆರವುಗೊಳಿಸಿದೆ.
ಜಿಲ್ಲೆಯ ರೈತರು ಹೊಂದಿರುವ ಜಮೀನಿಗೆ ಅನುಗುಣವಾಗಿ ಜೋಳವನ್ನು ಖರೀದಿಸಲು ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜೋಳವನ್ನು ಮಾರಾಟ ಮಾಡಿದ ರೈತರು ಕೂಡ ಗರಿಷ್ಠ ಮಿತಿಯನ್ನು ಸಡಿಲಿಸಿ ಬಿಳಿಜೋಳ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ನÉೂೀಂದಣಿ ಮತ್ತು ಖರೀದಿ ಅವಧಿ: ರೈತರ ನೊಂದಾಣಿ ಪ್ರಾರಂಭ ಡಿ.12ರಿಂದ ಜ.31 2023ರವರೆಗೆ ಮತ್ತು ಖರೀದಿ ಪ್ರಾರಂಭ ಜ.1ರಿಂದ ಮಾ.31ರವರೆಗೆ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.