ವನ್ಯಜೀವಿ ತಿದ್ದುಪಡಿ ಕಾಯ್ದೆಗೆ ರಾಜ್ಯಸಭೆ ಅಂಗೀಕಾರ

ವನ್ಯಜೀವಿ ತಿದ್ದುಪಡಿ ಕಾಯ್ದೆಗೆ ರಾಜ್ಯಸಭೆ ಅಂಗೀಕಾರ

ಸಂರಕ್ಷಿತ ಅರಣ್ಯ ಪ್ರದೇಶದ ನಿರ್ವಹಣೆ ಉತ್ತಮಗೊಳಿಸಲು ಸಿದ್ಧಪಡಿಸಿರುವ ವನ್ಯಜೀವಿ(ಸಂರಕ್ಷಣೆ) ತಿದ್ದುಪಡಿ ಕಾಯ್ದೆ, 2021 ಅನ್ನು ಗುರುವಾರ ರಾಜ್ಯಸಭೆ ಅಂಗೀಕರಿಸಿದೆ. ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಜಾನುವಾರುಗಳನ್ನು ಮೇಯಿಸಲು, ಅರಣ್ಯ ಪ್ರದೇಶದಿಂದ ಕುಡಿಯುವ ಹಾಗೂ ಮನೆ ಬಳಕೆ ನೀರು ಪಡೆದುಕೊಳ್ಳಲು ಮಸೂದೆಯಲ್ಲಿ ಅವಕಾಶವಿದೆ. ಮಸೂದೆಯನ್ನು ರಾಜ್ಯಸಭೆ ಗುರುವಾರ ಧ್ವನಿ ಮತದ ಮೂಲಕ ಅಂಗೀಕರಿಸಿತು. ಲೋಕಸಭೆ ಮುಂಗಾರು ಅಧಿವೇಶನದಲ್ಲಿ ಈ ಮಸೂದೆಯನ್ನು ಅಂಗೀಕರಿಸಿತ್ತು.