ಶಿಕ್ಷಣ, ಆರೋಗ್ಯ ಇಲಾಖೆಗೆ ಸಂಬಂಧಿಸಿದ ವರ್ಗಾವಣೆಗೆ ತಡೆ ನೀಡಿದ ಸಿಎಂ ಬೊಮ್ಮಾಯಿ

ಶಿಕ್ಷಣ, ಆರೋಗ್ಯ ಇಲಾಖೆಗೆ ಸಂಬಂಧಿಸಿದ ವರ್ಗಾವಣೆಗೆ ತಡೆ ನೀಡಿದ ಸಿಎಂ ಬೊಮ್ಮಾಯಿ

ಶಿಕ್ಷಣ ಇಲಾಖೆ & ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯಾವುದೇ ವರ್ಗಾವಣೆ ಮಾಡದಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಶಿಕ್ಷಣ, ಸಾಕ್ಷರತಾ ಇಲಾಖೆ & ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ವರ್ಗಾವಣೆ ಪ್ರಸ್ತಾವನೆಗಳನ್ನು ಮುಂದಿನ ಸೂಚನೆಯವರೆಗೆ ಸಿಎಂ ಅವರ ಸಚಿವಾಲಯ ಮಂಡಿಸದಂತೆ ಎರಡೂ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಭಾರೀ ಸಂಖ್ಯೆಯಲ್ಲಿ ವರ್ಗಾವಣೆಯಾದರೆ ಕೆಲಸಕ್ಕೆ ಸಮಸ್ಯೆಯಾಗಬಹುದೆಂದು ಸಿಎಂ ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.