ವರ್ಚುವಲ್ ಮೂಲಕ ಬೆಂಗಳೂರು ಟೆಕ್ ಸಮ್ಮಿಟ್ಗೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ನಡೆಯುವ ಟೆಕ್ ಸಮ್ಮಿಟ್ಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಟೆಕ್ ಸಮ್ಮಿಟ್ಗೆ ನಡೆಯಲಿದೆ.
ಟೆಕ್ ಸಮ್ಮಿಟ್ನಲ್ಲಿ 31 ದೇಶಗಳ ಸಚಿವರು ಭಾಗಿಯಾಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಐಟಿ-ಬಿಟಿ ಇಲಾಖೆ ಸಚಿವ ಅಶ್ವಥ್ ನಾರಾಯಣ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸಿಎಸ್ ವಂದಿತಾ ಶರ್ಮ ಮತ್ತು ವಿವಿಧ ಉದ್ಯಮಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಇನ್ನು ಟೆಕ್ ಸಮ್ಮಿಟ್ ಚಾಲನೆ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ತಂತ್ರಜ್ಞಾನದ ತವರು. ಭಾರತದ ಆವಿಷ್ಕಾರ ವಲಯದಲ್ಲಿ ಬೆಂಗಳೂರು ನಂಬರ್ ಒನ್ ಆಗಿದೆ. ಜಾಗತಿಕ ಆವಿಷ್ಕಾರ ಇಂಡೆಕ್ಸ್ನಲ್ಲಿ ಭಾರತ 4ನೇ ಸ್ಥಾನದಲ್ಲಿದೆ. ನೂರಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಕಂಪನಿಗಳ ಆರ್ ಅಂಡ್ ಡಿ ಸೆಂಟರ್ ಗಳು ಭಾರತದಲ್ಲಿವೆ. ಭಾರತ ವಿಶ್ವದ 3ನೇ ಅತಿದೊಡ್ಡ ಸ್ಟಾರ್ಟ್ ಅಪ್ ಕೇಂದ್ರ. ಆಯುಷ್ಮಾನ್ ಭಾರತ್ ಯೋಜನೆ ವಿಶ್ವದ ದೊಡ್ಡ ಆರೋಗ್ಯ ವಿಮೆ. ಸ್ವಾಮಿತ್ವ ಯೋಜನೆಯಡಿ ಡ್ರೋನ್ ಮೂಲಕ ಭೂಮಿ ಸರ್ವೆ ಮಾಡಲಾಗುತ್ತಿದೆ.