ವಾಹನ ಚಾಲಕರೇ ಎಚ್ಚರ.. ಹೀಗೆ ಮಾಡಿದರೇ ನಿಮ್ಮ ಲೈಸನ್ಸ್ ಅಮಾನತು

ಫುಟ್ ಪಾತ್ ಗಳಲ್ಲಿ ತಮ್ಮ ವಾಹನಗಳನ್ನು ಚಲಾಯಿಸುವವರ ಮೇಲೆ ಬೆಂಗಳೂರು ನಗರ ಸಂಚಾರ ಪೊಲೀಸರು ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಇನ್ಮುಂದೆ ವಾಹನಗಳನ್ನು ಫುಟ್ ಪಾತ್ ಮೇಲೆ ಚಲಾಯಿಸುವವರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಲು ಪೊಲೀಸ್ ಇಲಾಖೆ ಸಿದ್ದತೆ ನಡೆಸಿದೆ. ವಾಹನ ಸವಾರರು ಫುಟ್ ಪಾತ್ ಮೇಲೆ ವಾಹನ ಚಲಾಯಿಸಿದರೆ, ಚಾಲನಾ ಪರವಾನಗಿಯನ್ನು ಅಮಾನತುಗೊಳಿಸುವುದರ ಜೊತೆಗೆ ಅವರ ವಾಹನವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.