ವಿಜಯಪುರ; ಬಿಜೆಪಿ ಅಭ್ಯರ್ಥಿಯಾಗಲು ಪೊಲೀಸ್ ಕೆಲಸಕ್ಕೆ ಗುಡ್‌ಬೈ!

ಬೆಂಗಳೂರು, ಫೆಬ್ರವರಿ 02; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳು ಆರಂಭವಾಗಿದೆ. ಹಲವಾರು ಜನರು ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ತಯಾರಿ ನಡೆಸುತ್ತಿದ್ದಾರೆ. ವಿವಿಧ ಪಕ್ಷಗಳ ಟಿಕೆಟ್ ಪಡೆಯಲು ಲಾಬಿ ಮಾಡುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಲು ಪೊಲೀಸ್ ಅಧಿಕಾರಿಯೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕೆಲಸ ಮಾಡುತ್ತಿದ್ದ ಮಹೇಂದ್ರ ನಾಯಕ್ ಪೊಲೀಸ್ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗಠಾಣ ಕ್ಷೇತ್ರದಿಂದ ಮುಂದಿನ ಚುನಾವಣೆಗೆ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪುತ್ರ ಗೋಪಾಲ ಕಾರಜೋಳ ಆಕಾಂಕ್ಷಿಯಾಗಿದ್ದಾರೆ. ಇತ್ತ ಮಹೇಂದ್ರ ನಾಯಕ್ ಸಹ ಟಿಕೆಟ್‌ಗಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಕ್ಷೇತ್ರ ಪ್ರಸ್ತುತ ಜೆಡಿಎಸ್ ವಶದಲ್ಲಿದೆ.