ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ : ಪಾಲಿಕೆ ಸದಸ್ಯರಿಗೆ ಸಿಎಂ ಬೊಮ್ಮಾಯಿ ಸನ್ಮಾನ

ಬೆಂಗಳೂರು : ಇತ್ತೀಚೆಗೆ ನಡೆದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಸದಸ್ಯರಿಗೆ ಸಿಎಂ ಬೊಮ್ಮಾಯಿ ಅಭಿನಂದಿಸಿ ಸನ್ಮಾನ ಮಾಡಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ 35 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದರು.
ಈ ಫಲಿತಾಂಶ ಮುಂಬರುವ ಚುನಾವಣೆಯಲ್ಲಿ, ಕರ್ನಾಟಕದೆಲ್ಲೆಡೆ ಕಮಲ ಅರಳುವ ಮುನ್ಸೂಚನೆಯಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು. ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಶಾಸಕ ಡಾ. ಎನ್. ಮಹೇಶ್ & ದೇವದುರ್ಲಭ ಕಾರ್ಯಕರ್ತರಿಗೆ ಮನಃಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.