ವಿದ್ಯಾರ್ಥಿ ಹಾಗೂ ಪೋಷಕರ ಮೇಲೆ ಹೆಜ್ಜೆನು ದಾಳಿ
ಹುಬ್ಬಳ್ಳಿ: ಕಿಡಿಗೇಡಿಗಳು ಕಲ್ಲು ತೂರಿದ ಪರಿಣಾಮ ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿ ಹಾಗೂ ಪೋಷಕರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಸಧ್ಯ ಇಬ್ಬರಿಗೂ ಕೂಡಾ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗ್ತಾಯಿದೆ
ಹೌದು, ಕೇಶ್ವಾಪುರದ ಸೆಂಟ್ ಮೈಕಲ್ ಸ್ಕೂಲ್ ನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಇಂದು ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ತೆರಳಿದ್ದರು. ಈ ವೇಳೆ ಶಾಲೆಯ ಆವರಣದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನಿಗೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ.
ಹೀಗಾಗಿ ಸ್ಥಳದಲ್ಲಿದ್ದ ವಿದ್ಯಾರ್ಥಿಗಳು, ಪೋಷಕರು ಹಾಗೂ ಪೋಲಿಸರ ಮೇಲೆ ದಾಳಿ ಮಾಡಿವೆ.ಕೂಡಲೇ ಪರೀಕ್ಷಾ ಕೇಂದ್ರದಲ್ಲಿದ್ದವರು ಕಾಲ್ಕಿತ್ತಿದ್ದಾರೆ. ಆದರೂ ವಿದ್ಯಾರ್ಥಿ ಇಮಾಮ್, ಪೋಷಕರಾದ ರಾಜೇಶ್ವರಿ.ಕೆ ಹಾಗೂ ಪೊಲೀಸ್ ಸಿಬ್ಬಂದಿ ವಿದ್ಯಾ ದ್ಯಾಮನೂರು ಎಂಬುವರ ಮೇಲೆ ಹೆಜ್ಜೇನು ದಾಳಿ ಮಾಡಿವೆ.ಸಧ್ಯ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.