ವಿಧಾನ ಪರಿಷತ್ ಚುನಾವಣೆ: 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ, ಬಿಎಸ್‌ವೈ

ವಿಧಾನ ಪರಿಷತ್ ಚುನಾವಣೆ: 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ, ಬಿಎಸ್‌ವೈ

ಶಿಕಾರಿಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ 15 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎ.ಸ್.

ಶಾಸಕರು ಹಾಗೂ ಮಂತ್ರಿಗಳು ಉತ್ಸಾಹದಿಂದ ಚುನಾವಣೆ ಕೆಲಸ ಮಾಡುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಮೊದಲ ಸುತ್ತಿನಲ್ಲಿಯೇ ಗೆಲುವು ಸಾಧಿಸುತ್ತಾರೆ. ವಿಧಾನ ಪರಿಷತ್ತಿನಲ್ಲಿ ನಮಗೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೈಯಕ್ತಿಕ ಟೀಕೆ ನಡೆಸುತ್ತಿರುವ ವಿರೋಧ ಪಕ್ಷ ಮುಖಂಡರಿಗೆ ಈ ಚುನಾವಣೆ ಫಲಿತಾಂಶ ಉತ್ತರ ಸಿಗುತ್ತದೆ. ಸ್ಥಳೀಯ ಸಂಸ್ಥೆಗಳ ಈ ಚುನಾವಣೆಯಲ್ಲಿ ಜನರು 15ಕ್ಷೇತ್ರಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಿ ಕೊಟ್ಟರೇ ಅದರ ಅರ್ಥ ಗ್ರಾಮೀಣಾ ಪ್ರದೇಶದಲ್ಲಿ ಕಾಂಗ್ರೆಸ್ ದೂಳಿಪಟವಾಗಿ ಬಿಜೆಪಿ ಪರ ಅಲೆ ಇದೆ ಎಂಬುದು ಸ್ಪಷ್ಟವಾಗುತ್ತದೆ. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೊಮ್ಮೆ ನಾವು ಅಧಿಕಾರಕ್ಕೆ ಬರಲು ಈ ಫಲಿತಾಂಶ ನಾಂದಿಯಾಗಲಿದೆ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ತಿರ್ಮಾನ ತೆಗೆದುಕೊಳ್ಳುತ್ತಾರೆ. ಪುತ್ರ ವಿಜಯೇಂದ್ರ ಗೆ ಸಚಿವ ಸ್ಥಾನದ ನೀಡುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು,ವಿಜಯೇಂದ್ರ ಸಚಿವ ಸ್ಥಾನದ ಅಪೇಕ್ಷೆ ಇಟ್ಟುಕೊಂಡಿಲ್ಲ ಎಂದರು.