ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡನ ಗೆಲುವಿಗೆ ಮನವಿ ಮಾಡಿ ಅಚ್ಚರಿ ಮೂಡಿಸಿದ ಬಿಜೆಪಿ ಸಂಸದ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡನ ಗೆಲುವಿಗೆ ಮನವಿ ಮಾಡಿ ಅಚ್ಚರಿ ಮೂಡಿಸಿದ ಬಿಜೆಪಿ ಸಂಸದ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರ ಪಡೆಯಲು ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಸಹ ಈ ನಿಟ್ಟಿನಲ್ಲಿ ತೊಡಗಿಕೊಂಡಿವೆ. ರಾಜಕೀಯ ಪಕ್ಷಗಳ ನಾಯಕರ ಆರೋಪ - ಪ್ರತ್ಯಾರೋಪದ ನಡುವೆ ಅಪರೂಪದ ಘಟನೆಯೊಂದು ನಡೆದಿದೆ.

ಹೌದು, ಸಮಾರಂಭ ಒಂದರಲ್ಲಿ ಪಾಲ್ಗೊಂಡಿದ್ದ ತುಮಕೂರು ಕ್ಷೇತ್ರದ ಬಿಜೆಪಿ ಸಂಸದ ಜಿ.ಎಸ್. ಬಸವರಾಜು, ವಿಧಾನಸಭಾ ಚುನಾವಣೆಯಲ್ಲಿ ಕೆ.ಎನ್. ರಾಜಣ್ಣ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದು, ಗಮನಾರ್ಹ ಸಂಗತಿ ಎಂದರೆ ರಾಜಣ್ಣ ಕಾಂಗ್ರೆಸ್ಸಿನ ಮಾಜಿ ಶಾಸಕರು. ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಸುದ್ದೇಕುಂಟೆ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಧಾರ್ಮಿಕ ವಿಶೇಷ ಪೂಜಾ ಸಮಾರಂಭದಲ್ಲಿ ಮಾತನಾಡಿದ ಸಂಸದ ಬಸವರಾಜು, ನಾನು ಸ್ನೇಹಿತ ರಾಜಣ್ಣ ಅವರ ಸಹಕಾರದಿಂದ ಲೋಕಸಭಾ ಸದಸ್ಯನಾಗಿ ಆಯ್ಕೆಯಾಗಿದ್ದೇನೆ. ಈ ಕ್ಷೇತ್ರದ ಜನತೆ ರಾಜಣ್ಣ ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕು ಎಂದು ಕೋರಿದ್ದಾರೆ. ಇದೇ ವೇದಿಕೆಯಲ್ಲಿ ರಾಜಣ್ಣ ಅವರೂ ಸಹ ಇದ್ದದ್ದು ಮತ್ತೊಂದು ವಿಶೇಷ.