ವಿಧಾನಸಭಾ ಚುನಾವಣೆ ಕಾಂಗ್ರೆಸ್ ಭರ್ಜರಿ ಸಿದ್ದತೆ : ಜ.27 ರಂದು ಡಿಕೆಶಿ ನೇತೃತ್ವದಲ್ಲಿ ಮಹತ್ವದ ಸಭೆ

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಭರ್ಜರಿ ಸಿದ್ದತೆ : ಜ.27 ರಂದು ಡಿಕೆಶಿ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು : ವಿಧಾನಸಭಾ ಚುನಾವಣೆ ಕಾಂಗ್ರೆಸ್ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಜ.27 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿಯಾಗಿದೆ.

ಜ.27 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಭೆ ನಿಗದಿಯಾಗಿದ್ದು, ಶಾಸಕರು, ಮಾಜಿ ಶಾಸಕರ ಜೊತೆ ಸಭೆ ಡಿಕೆಶಿ ಸಭೆ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆಯ ತಯಾರಿ, ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ, ಹಲವು ಯೋಜನೆಗಳ ಜಾರಿ ಬಗ್ಗೆ ಡಿಕೆ ಶಿವಕುಮಾರ್ ಮಹತ್ವದ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಶೀಘ್ರದಲ್ಲೇ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಲಿದ್ದು, ಈಗಾಗಲೇ ವಿವಿಧ ಪಕ್ಷಗಳು ಮತದಾರರನ್ನು ಸೆಳೆಯುವಲ್ಲಿ ನಿರತರಾಗಿವೆ. ಬಸ್ ಯಾತ್ರೆ, ಸಮಾವೇಶ ಸೇರಿದಂತೆ ಹಲವು ಕಡೆ ಚುನಾವಣೆಗೆ ಭರ್ಜರಿ ಸಿದ್ದತೆ ಮಾಡಲಾಗುತ್ತಿದೆ. ಕಾಂಗ್ರೆಸ್ ಕೂಡ ಬಸ್ ಯಾತ್ರೆ ನಡೆಸುತ್ತಿದ್ದು, ಮತದಾರರಿಗೆ ಹಲವು ಭರವಸೆಗಳನ್ನು ನೀಡಿದೆ.