ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ : ಜನವರಿ 3ರಿಂದ `ಸಿದ್ದರಾಮಯ್ಯ ಬಸ್ ಯಾತ್ರೆ' ಆರಂಭ

ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ : ಜನವರಿ 3ರಿಂದ `ಸಿದ್ದರಾಮಯ್ಯ ಬಸ್ ಯಾತ್ರೆ' ಆರಂಭ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೆ ಭರ್ಜರಿ ಸಿದ್ಧತೆ ಕೈಗೊಂಡಿದ್ದು, ರಾಜ್ಯದ 224 ಕ್ಷೇತ್ರಗಳಲ್ಲಿ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಯಶಸ್ಸಿನ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಥಯಾತ್ರೆಗೆ ಪ್ಲ್ಯಾನ್ ನಡೆಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ರಥಯಾತ್ರೆ ಮೂಲಕ ಸಿದ್ದರಾಮಯ್ಯ ಅವರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಸಂಚಾರ ಮಾಡಿ ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಠಿಸಲು ಪ್ರಯತ್ನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.ಇದೇ ಜನವರಿ 3 ರಿಂದ ಸಿದ್ದರಾಮಮಯ್ಯನವರ ಬಸ್ ಯಾತ್ರೆ ಆರಂಭವಾಗಲಿದೆ. ಬಸವಕಲ್ಯಾಣದಿಂದ ಆರಂಭವಾಗಲಿರುವ ಸಿದ್ದು ಬಸ್ ಯಾತ್ರೆ, ಮೊದಲ ಹಂತದಲ್ಲಿ ಉತ್ತರ ಕರ್ನಾಟಕದ ಪ್ರಮುಖ 10ರಿಂದ 12 ಜಿಲ್ಲೆಗಳಲ್ಲಿ ಸಂಚರಿಸಲಿದೆ. ಸಿದ್ದರಾಮಯ್ಯ ಉತ್ತರ ಕರ್ನಾಟಕದಿಂದ ಪ್ರಾರಂಭ ಮಾಡಿದರೆ ಡಿ.ಕೆ.ಶಿವಕುಮಾರ್ ದಕ್ಷಿಣ ಕರ್ನಾಟಕ ಭಾಗದಿಂದ ​ಬಸ್ ಯಾತ್ರೆ ಮಾಡುವ ಸಾಧ್ಯತೆ ಇದೆ.