ವಿಮಾನದಲ್ಲಿ ಇರುಮುಡಿ ಕೊಂಡೊಯ್ಯಲು ಅನುಮತಿ

ನವದೆಹಲಿ: ಇನ್ನು ಮುಂದೆ ಶಬರಿಮಲೆ ಭಕ್ತಾದಿಗಳಿಗೆ ವಿಮಾನದ 'ಕ್ಯಾಬಿನ್ ಬ್ಯಾಗೇಜ್'ನಲ್ಲಿ ಇರುಮುಡಿ ಜತೆಗೆ ತೆಂಗಿನಕಾಯಿ ಕೊಂಡೊಯ್ಯಲು ವಿಮಾನಯಾನ ಭದ್ರತಾ ನಿಯಂತ್ರಕ ಸಂಸ್ಥೆಯಾದ 'ಬಿಸಿಎಎಸ್' ಅನುಮತಿ ನೀಡಿದೆ. ಶಬರಿಮಲೆ ಯಾತ್ರಾರ್ಥಿಗಳ ಇರುಮುಡಿ ಇರುವ ಬ್ಯಾಗೇಜ್ ಅನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸಿದ ಬಳಿಕ, ಅಂದರೆ ಎಕ್ಸ್ರೇ, ಸ್ಫೋಟಕ ಪತ್ತೆ ಪರೀಕ್ಷೆ & ವಿಮಾನಯಾನ ಭದ್ರತಾ ಸಿಬ್ಬಂದಿ ಸ್ವಯಂ ಪರೀಕ್ಷೆ ನಡೆಸಿದ ಬಳಿಕ ಅನುಮತಿ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.