ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನ

ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2019- 20ನೇ ಸಾಲಿನ ಸಮೃದ್ಧಿ ಹಾಗೂ 2022-23ನೇ ಉದ್ಯೋಗಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಹಾಗೂ ಪ್ರೋತ್ಸಾಹಧನ ಪಡೆಯಲು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಉಪನಿರ್ದೇಶಕರ ಕಛೇರಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಫೆಬ್ರವರಿ 6 ರ ಸಂಜೆ 5:30 ರೊಳಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಿದ್ವಾಯಿ ಆಸ್ಪತ್ರೆ ಹತ್ತಿರ, ಸುಧಾರಣ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಧರ್ಮಾರಾo ಕಾಲೇಜ್ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 080-29578688 ಇಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.