ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದ ಮೀರಾಬಾಯಿ
ನವದೆಹಲಿ: ಮಣಿಕಟ್ಟಿನ ಗಾಯದಿಂದಾಗಿ ಭಾರತದ ಸ್ಟಾರ್ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಬುಧವಾರ ಕೊಲಂಬಿಯಾದ ಬೊಗೊಟಾದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು 200 ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದಾರೆ. 2017ರ ವಿಶ್ವ ಚಾಂಪಿಯನ್ ಚಾನು ಸೆಪ್ಟೆಂಬರ್‌ನಲ್ಲಿ ನಡೆದ ತರಬೇತಿ ವೇಳೆ ಮಣಿಕಟ್ಟಿಗೆ ಗಾಯ ಮಾಡಿಕೊಂಡಿದ್ದರು. ಅವರು ಅಕ್ಟೋಬರ್ ನಲ್ಲಿ ಗಾಯದೊಂದಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲೂ ಭಾಗವಹಿಸಿದ್ದರು.