ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ : ಶೀಘ್ರದಲ್ಲೇ ಕೆಲಸ ಮುಗಿಸಿ ಸಚಿವ ವಿ ಸೋಮಣ್ಣ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ "ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ " ಕಾಮಗಾರಿಯ ಸ್ಥಳವನ್ನು ವಸತಿ ಸಚಿವವಿ.ಸೋಮಣ್ಣ ಇಂದು ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು.
ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಿಸುವ ಸಲುವಾಗಿ ಮಂಜುನಾಥನಗರದ ಬಳಿ ಮೇಲುಸೇತುವೆ, ಶಿವನಗರ 1 ಮತ್ತು 8ನೇ ಮುಖ್ಯ ರಸ್ತೆಯ ಕೂಡು ಸ್ಥಳದಲ್ಲಿ ಕೆಳಸೇತುವೆ ಹಾಗೂ ಬಸವೇಶ್ವರ ನಗರ ವೃತ್ತದ ಏಕಮುಖ ಸಂಚಾರದ ಬಳಿ ಮೇಲುಸೇತುವೆಯ ಗ್ರೇಡ್ ಸೆಪರೇಟರ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು.
ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ ಬಹುತೇಕ ಕಾಮಗಾರಿ ಮುಗಿದಿದ್ದು, ನವೆಂಬರ್ ಒಳಗೆ ಲೋಕಾರ್ಪಣೆಗೊಳಿಸಲು ಸಚಿವರು ಸೂಚಿಸಿದ್ದಾರೆ..