ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗ ವರದಿ ಶೀಘ್ರ ಸಲ್ಲಿಕೆಗೆ ಮನವಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ, ಸೌಲಭ್ಯಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಶೀಘ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗದಿಂದ ಮನವಿ ಮಾಡಲಾಗಿದೆ.
ಸಂಘದ ಅಧ್ಯಕ್ಷ ಸಿ.ಎಸ್.
ಹಿಂದಿನ ವೇತನ ಆಯೋಗದ ಅವಧಿ ಮಾರ್ಚ್ 31ಕ್ಕೆ ಮುಕ್ತಾಯವಾಗಲಿದ್ದು, ಚುನಾವಣೆ ಸಮೀಪಿಸುತ್ತಿರುವುದರಿಂದ ನೀತಿ ಸಂಹಿತೆ ಜಾರಿಯಾಗುವ ದಿನಗಳು ಸಮೀಪಿಸುತ್ತಿವೆ. ಹೀಗಾಗಿ ಸರ್ಕಾರಿ ನೌಕರರಿಗೆ ಸಕಾಲಿಕ ವೇತನ ಪರಿಷ್ಕರಣೆಗೆ ಅನುಕೂಲವಾಗುವಂತೆ ಶೀಘ್ರವೇ ವರದಿ ಸಲ್ಲಿಸಬೇಕು ಎಂದು ಕೋರಲಾಗಿದೆ.