ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಹರಿದು ಬಂದ ಭಕ್ತ ಸಾಗರ
ಮಕರ ಜ್ಯೋತಿ ದರ್ಶನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆ ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ತೆಲಂಗಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.
ಶಬರಿಮಲೆಯಲ್ಲಿ ಎಲ್ಲಿ ನೋಡಿದರಲ್ಲಿ ಭಕ್ತಿಯಿಂದ ಮಿಂದೇಳುತ್ತಿರುವ ಭಕ್ತರು ಕಂಡು ಬರುತ್ತಿದ್ದು, ವಾಹನಗಳು ಸಹ ತುಂಬಿ ತುಳುಕುತ್ತಿವೆ. ಬಹಳಷ್ಟು ಭಕ್ತರು ಸ್ವಾಮಿಯ ದರ್ಶನ ಪಡೆದು ವಾಪಸ್ ಆಗುತ್ತಿದ್ದರೆ, ಇನ್ನಷ್ಟು ಮಂದಿ ಮಕರ ಜ್ಯೋತಿಯ ನಿರೀಕ್ಷೆಯಲ್ಲಿದ್ದಾರೆ.
ಮಕರ ಜ್ಯೋತಿ ದರ್ಶನ ಸಂದರ್ಭದಲ್ಲಿ ಭಕ್ತರ ಸಂಖ್ಯೆಯಲ್ಲಿ ದೊಡ್ಡಮಟ್ಟದ ಏರಿಕೆ ಕಂಡು ಬರಬಹುದೆಂದು ನಿರೀಕ್ಷಿಸಿರುವ ಪೊಲೀಸರು ನೂಕುನುಗ್ಗಲು ಉಂಟಾಗದಂತೆ ತಡೆಯಲು ವ್ಯಾಪಕ ಕ್ರಮ ಕೈಗೊಂಡಿದ್ದಾರೆ.