ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಸಾರ್ವಜನಿಕರಲ್ಲಿ ಆತಂಕ

ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ಸಾರ್ವಜನಿಕರಲ್ಲಿ ಆತಂಕ

ಹಾಸನ: ಜಿಲ್ಲೆಯ ಹಳೆಬೀಡು ರಸ್ತೆಯ ಮಲೆನಾಡು ತಾಂತ್ರಿಕ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿ ಆಯ್ಕೆ ಬಳಿಕ ಗೆದ್ದವರು ಸೋತವರ ನಡುವೆ ಗಲಾಟೆಯಾಗಿದ್ದು, ಈ ವೇಳೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿಯಾಗಿದೆ. ವಿದ್ಯಾರ್ಥಿ ಪ್ರತಿನಿಧಿ ಚುನಾವಣಾ ಫಲಿತಾಂಶ ಬಳಿಕ 2 ಗುಂಪುಗಳ ಸುಮಾರು 150ಕ್ಕೂ ಅಧಿಕ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.