ಜ.19ರಂದು ಯಾದಗಿರಿಗೆ ಪ್ರಧಾನಿ ಮೋದಿ ಭೇಟಿ; ತಾ|ನ ಶಾಲಾ-ಕಾಲೇಜುಗಳಿಗೆ ರಜೆ
ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ ಅವರು ಜ.19ರಂದು ಯಾದಗಿರಿ ಜಿಲ್ಲೆಗೆ ಆಗಮಿಸಲಿದ್ದಾರೆ. ಜಿಲ್ಲೆಯ ಹುಣಸಗಿ ತಾ|ನ ಕೊಡೆಕಲ್ನಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಜ.19ರಂದು ಹುಣಸಗಿ ತಾ|ನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಹುಣಸಗಿ ತಹಶೀಲ್ದಾರ್ ಜಗದೀಶ್ ಚೌರ್ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು 1,050 ಕೋಟಿ ರೂ. ವೆಚ್ಚದಲ್ಲಿ ಬಸವಸಾಗರ ಜಲಾಶಯಕ್ಕೆ ನಿರ್ಮಾಣ ಮಾಡಿರುವ 365 ಗೇಟ್ಗಳನ್ನು ಉದ್ಘಾಟಿಸಲಿದ್ದಾರೆ.