ಶಾಸಕ 'ಮಾಡಾಳ್ ವಿರೂಪಾಕ್ಷಪ್ಪ' ಲೋಕಾಯುಕ್ತ ಕಸ್ಟಡಿ ಇಂದಿಗೆ ಅಂತ್ಯ : ಇಂದು ಕೋರ್ಟ್ ಗೆ ಹಾಜರು
ಬೆಂಗಳೂರು: ಬಿಜೆಪಿ ಶಾಸಕ 'ಮಾಡಾಳ್ ವಿರೂಪಾಕ್ಷಪ್ಪ' ಲೋಕಾಯುಕ್ತ ಕಸ್ಟಡಿ ಇಂದಿಗೆ ಅಂತ್ಯಗೊಂಡಿದ್ದು, ಇಂದು ಕೋರ್ಟ್ ಗೆ ಹಾಜರುಪಡಿಸಲಾಗುತ್ತಿದೆ.
ಇತ್ತೀಚೆಗೆ ಲೋಕಾಯುಕ್ತ ಪೊಲೀಸರಿಂದ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಂತ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ ಬಳಿಕ, ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿತ್ತು.
ಮಾಡಾಳ್ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಪ್ರಕರಣ ಸಂಬಂಧ ನ್ಯಾಯಮೂರ್ತಿ ಬಿ.ಜಯಂತ್ ಕುಮಾರ್ ವಿಚಾರಣೆ ನಡೆಸಿದ್ದರು. ನ್ಯಾಯಪೀಠದ ಮುಂದೆ ಲೋಕಾಯುಕ್ತ ಪೊಲೀಸರ ಪರ ವಕೀಲರು ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೋರಿದರು. ಆದ್ರೇ ಶಾಸಕರ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದರು. ಇದರ ನಡುವೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 1ರವರೆಗೆ ಐದು ದಿನ ಲೋಕಾಯುಕ್ತ ಪೊಲೀಸರಿಗೆ ಕಸ್ಟಡಿಗೆ ನೀಡಿ ಆದೇಶ ಹೊರಡಿಸಲಾಗಿತ್ತು.
ಕೊಪ್ಪಳದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 16 ಕೆಜಿ ಬೆಳ್ಳಿ, ಹಣ ಜಪ್ತಿ, ಇಬ್ಬರು ಪೊಲೀಸರ ವಶಕ್ಕೆ
ಕೊಪ್ಪಳ : ಜಿಲ್ಲೆಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆಯಿಲ್ಲದ ಬೆಳ್ಳಿ, ಹಣ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ವರದಿಯಾಗಿದೆ.
ಚುನಾವಣೆ ಹತ್ತಿರವಾಗುತ್ತಿದ್ದಂತೆ ನಗರದೆಲ್ಲೆಡೆ ಚೆಕ್ ಪೋಸ್ಟ್ ನಿರ್ಮಿಸಿ, ರಸ್ತೆಯಲ್ಲಿ ಓಡಾಡುವ ವಾಹವನ್ನು ತಡೆದು ಪರಿಶೀಲನೆ ನಡೆಸಲಾಗುತಿದ್ದು, ಈ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 16 ಕೆಜಿ ಬೆಳ್ಳಿ, ಹಣ ಜಪ್ತಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಸುಮಾರು 9.67 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ವಸ್ತು ಸೇರಿ 1.10 ಲಕ್ಷ ಹಣವನ್ನ ಜಪ್ತಿ ಮಾಡಲಾಗಿದೆ. ಉದ್ಯಮಿಗಳಾದ ಕೈಲಾಸ್ ಜೈನ್, ದೇವಿಚಂದ್ರ ಜೈನ್ ಎಂಬುವವರು ಹುಬ್ಬಳ್ಳಿಯಿಂದ ಕೊಪ್ಪಳಕ್ಕೆ ಬೆಳ್ಳಿ, ಹಣ ತೆಗೆದುಕೊಂಡು ಬರುತ್ತಿದ್ದರು . ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಇಬ್ಬರನ್ನ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ