ಶಿಕಾರಿಪುರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ; ಬಿ.ವೈ ರಾಘವೇಂದ್ರ ಜೊತೆ ಚರ್ಚೆ

ಶಿಕಾರಿಪುರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ; ಬಿ.ವೈ ರಾಘವೇಂದ್ರ ಜೊತೆ ಚರ್ಚೆ

ಶಿವಮೊಗ್ಗ: ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ‌ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದಾರೆ.

ನಿನ್ನೆ ನಡೆದ ಘಟನೆ ಕುರಿತು ಸಚಿವ ಆರಗ ಜ್ಞಾನೇಂದ್ರ ಮಾಹಿತಿ ಪಡೆಯುತ್ತಿದ್ದಾರೆ.

ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಮಾಹಿತಿ ಪಡೆಯುತ್ತಿದ್ದಾರೆ. ಸಂಸದ ಬಿ.ವೈ ರಾಘವೇಂದ್ರ ಜೊತೆ ಗೃಹ ಸಚಿವ ಆರಗ ಜ್ಞಾನೇಂದ್ರ ಚರ್ಚೆ ನಡೆಸಿದ್ದಾರೆ.

ನಂತರ ಮಾತನಾಡಿದ ಅವರು, ಕೇಸ್‌ ದಾಖಲಿಸಬೇಡಿ ಎಂದು ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ ಎಂದು ಹೇಳಿದ್ದಾರೆ. ಆದರೆ ಕಲ್ಲುತೂರಾಟ ವೇಳೆ ಕೆಲವು ಪೊಲೀಸರಿಗೆ ಪೆಟ್ಟು ಬಿದ್ದಿದೆ. ಈ ಘಟನೆ ಕುರಿತು ತನಿಖೆ ಮಾಡುತ್ತೇವೆ . ಈ ಗಲಾಟೆಯಲ್ಲಿ ಕೆಲವರು ಕ್ರಿಮಿನಲ್‌ ಹಿನ್ನೆಲೆಯಳ್ಳವರಿದ್ದಾರೆ ಎಂದು ಶಿಕಾರಿಪುರದಲ್ಲಿ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.