ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಈ ವರ್ಷವೇ 15 ಸಾವಿರ ಶಿಕ್ಷಕರ ನೇಮಕ : ಸಿಎಂ ಬೊಮ್ಮಾಯಿ
ಹಾವೇರಿ : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷವೇ 15 ಸಾವಿರ ಶಿಕ್ಷಕರ ನೇಮಕ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸವಣೂರು ತಾಲೂಕಿನ ತೆವರಮೆಳ್ಳಿಹಳ್ಳಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, 15,000 ಶಿಕ್ಷರನ್ನು ಏಕಕಾಲದಲ್ಲಿ ನೇಮಕ ಮಾಡಲಾಗಿದೆ.
ರಾಜ್ಯದಲ್ಲಿ ಈ ವರ್ಷದಲ್ಲಿ 8,100 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುತ್ತಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಒಂದೇ ವರ್ಷದಲ್ಲಿ ಇಷ್ಟು ಪ್ರಮಾಣದ ಶಾಲಾ ಕೊಠಡಿಗಳ ನಿರ್ಮಾಣ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.