ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಪ್ರಥಮ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್: ಪರೀಕ್ಷೆ ಮುಂದೂಡಿಕೆ

ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಪ್ರಥಮ ಪಿಯುಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್: ಪರೀಕ್ಷೆ ಮುಂದೂಡಿಕೆ

ತುಮಕೂರು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ, ಪ್ರಥಮ ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರೋದಾಗಿ ಹೇಳಲಾಗುತ್ತಿದೆ. ಈ ಕಾರಣದಿಂದಲೇ ಪರೀಕ್ಷೆಯನ್ನು ಮಾರ್ಚ್ 6ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ನಿನ್ನೆ ಪ್ರಥಮ ಪಿಯುಸಿ ಪರೀಕ್ಷೆ ಆರಂಭಕ್ಕೂ ಮುನ್ನವೇ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿತ್ತು. ಸೋಮವಾರ ಕನ್ನಡ ವಿಷಯದ ಪರೀಕ್ಷೆ ಸುಸೂತ್ರವಾಗಿ ನಡೆದ ಬಳಿಕ, ಮಂಗಳವಾರ ನಡೆಯಬೇಕಿದ್ದ ಇಂಗ್ಲೀಷ್ ಪತ್ರಿಕೆ ಸೋರಿಕೆ ಆಗಿರೋದಾಗಿ ಹೇಳಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಪ್ರಥಮ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಮಾರ್ಚ್ 6ಕ್ಕೆ ಮುಂದೂಡಿಕೆ ಮಾಡಲಾಗಿದೆ. ಅಲ್ಲದೇ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದು ಹೇಗೆ ಎನ್ನುವ ಬಗ್ಗೆ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಾಧರ್, ತನಿಖೆ ಕೈಗೊಳ್ಳುವಂತೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ಇಲಾಖೆ ಮಟ್ಟದಲ್ಲಿಯೇ ತನಿಖೆ ನಡೆಸೋದಕ್ಕೂ ಸ್ಕ್ರೀನಿಂಗ್ ಕಮಿಟಿಯನ್ನು ರಚಿಸಿದ್ದಾರೆ.