ಶಿವಮೊಗ್ಗದ ಈ ಪ್ರದೇಶಗಳಲ್ಲಿ ಫೆ.24, 25 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗದ ಈ ಪ್ರದೇಶಗಳಲ್ಲಿ ಫೆ.24, 25 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಫೆ. 24 ಹಾಗೂ ಫೆ. 25 ರಂದು 11 ಕೆವಿ ಮಾರ್ಗದ ನಿರ್ವಹಣಾ ಕೆಲಸ ಇರುವುದರಿಂದ ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

11ಕೆವಿ ಮಾರ್ಗ ಮುಕ್ತತೆ ನೀಡುವ ಕಾರಣ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಕುವೆಂಪು ನಗರ, ಎನ್ಸಪ್ರಾ ಸಿಟಿ, ಶಿವಕುಮಾರ ಸ್ವಾಮಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಫೆ. 24 ರಂದು 11 ಕೆವಿ ಮಾರ್ಗದ ನಿರ್ವಹಣಾ ಕೆಲಸ ಇರುವುದರಿಂದ 11 ಕೆವಿ ಮಾರ್ಗ ಮುಕ್ತತೆ ನೀಡುವ ಕಾರಣ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಬೊಮ್ಮನಕಟ್ಟೆ ಎ ಬ್ಲಾಕ್, ಹಳೆ ಬೊಮ್ಮನಕಟ್ಟೆ, ದೇವಂಗಿ 2ನೇ ಹಂತ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.