ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ: ಸೋಗಾನೆಯ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗಾಗಿ ದೆಹಲಿಯಿಂದ ಸೇನಾ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂದಿಳಿದಿದ್ದಾರೆ.

775 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದ್ದು, ರಾಜ್ಯದ ಅತಿ ಉದ್ದದ ರನ್‌ ವೇ ಹೊಂದಿದ ಏರ್‌ಪೋರ್ಟ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

500 ಕೋಟಿ ರೂ. ಅಧಿಕ ವೆಚ್ಚದಲ್ಲಿ ನಿಲ್ದಾಣ ನಿರ್ಮಾಣವಾಗಿದೆ.

ಪ್ರಧಾನಿ ಮೋದಿಯನ್ನು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.