BREAKING NEWS : ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ಮೋದಿ ಟ್ವೀಟ್ : 'ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಸಾಧಿಸಲಿ' ಹಾರೈಕೆ | PM Modi

ನವದೆಹಲಿ : ಫೆಬ್ರವರಿ 27ರಂದು ಶಿವಮೊಗ್ಗ ವಿಮಾನ ನಿಲ್ದಾಣ( Shivamogga Airport) ಲೋಕಾರ್ಪಣೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಮಾಡಲಿದ್ದು, ಇದಕ್ಕೂ ಮೊದಲು ಮೋದಿ ವಿಮಾನ ನಿಲ್ದಾಣದ ಕುರಿತು ಟ್ವೀಟ್ ಮಾಡಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದ ಡ್ರೋನ್ ವಿಡಿಯೋವನ್ನು ಮೋದಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮೋದಿ ಟ್ವೀಟ್ ಮಾಡಿದ್ದು, ನೂತನ ಶಿವಮೊಗ್ಗ ವಿಮಾನ ನಿಲ್ದಾಣವು ಆರ್ಥಿಕ ಚೇತರಿಕೆಯನ್ನು ತರಲಿ ಹಾಗೂ ಸಂಪರ್ಕ ಕ್ರಾಂತಿಯ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸಲಿ' ಎಂದು ಹಾರೈಸಿದ್ದಾರೆ.
ಶಿವಮೊಗ್ಗದ ಬಿಜೆಪಿ ಸಂಸದ ಬಿ. ವೈ. ರಾಘವೇಂದ್ರ ಡ್ರೋನ್ ಕ್ಯಾಮೆರಾ ಮೂಲಕ ಸೆರೆ ಹಿಡಿಯಲಾದ ಶಿವಮೊಗ್ಗ ವಿಮಾನ ನಿಲ್ದಾಣದ ವಿಡಿಯೋವನ್ನು ಗುರುವಾರ ಟ್ವೀಟ್ ಮಾಡಿದ್ದರು ಈ ಟ್ವೀಟ್ಗೆ ಪ್ರಧಾನಿ ಮೋದಿ ಶುಕ್ರವಾರ ವಿಮಾನ ನಿಲ್ದಾಣದ ಬಗ್ಗೆ ಟ್ವೀಟ್ ಮಾಡಿ ಶುಭಹಾರೈಸಿದ್ದಾರೆ.
ಬಳಿಕ ಪ್ರಧಾನಿ ಮೋದಿ ಟ್ವೀಟ್ಗೆ ಬಿಜೆಪಿ ಸಂಸದ ಬಿ. ವೈ. ರಾಘವೇಂದ್ರ ಪ್ರತಿಕ್ರಿಯಿಸಿದ್ದು, ಮಲೆನಾಡಿನ ಜನರ ದಶಕಗಳ ಕನಸು ಕೊನೆಗೂ ನನಸಾಗಿದೆ. ಶಿವಮೊಗ್ಗದ ಸೋಗಾನೆಯಲ್ಲಿವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕೇವಲ ವಿಮಾನ ನಿಲ್ದಾಣವಾಗಿರದೆ ಮಲೆನಾಡು ಪ್ರದೇಶದ ಪರಿವರ್ತನೆಯ ಹೆಬ್ಬಾಗಿಲಾಗಿ ರೂಪುಗೊಳ್ಳಲಿದೆ ಎಂದಿದ್ದಾರೆ.