ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ - ಸಿಎಂ ಬೊಮ್ಮಾಯಿ

ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ - ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಚಿತ್ರದುರ್ಗದಲ್ಲಿ ಎಸ್. ಜೆ.ಎಂ ಆಂಗ್ಲ ಮಾಧ್ಯಮ ಶಾಲೆ ಹೆಲಿಪ್ಯಾಡ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರೊಂದಿಗೆ ವಿಸ್ತೃತವಾದ ಚರ್ಚೆ ಆಗಿದೆ.

ನನಗೆ ಬಂದಿರುವ ಮಾಹಿತಿ ಪ್ರಕಾರ ಆದಷ್ಟೂ ಬೇಗನೆ ಒಂದು ಸಭೆ ನಡೆಸಿ ಈ ಬಗ್ಗೆ ತೀರ್ಮಾನವಾಗಲಿದೆ. ಶೀಘ್ರದಲ್ಲಿ ಆಗುವ ನಿರೀಕ್ಷೆ ಇದೆ. ಸಚಿವ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗುತ್ತಾರೆ ಎನ್ನುವುದು ಹೈಕಮಾಂಡ್ ತೀರ್ಮಾನ ಮಾಡಲಿದೆ. ವಿಚಾರಗಳನ್ನು ವರಿಷ್ಠರಿಗೆ ಮನವರಿಕೆ ಮಾಡಲಾಗಿದೆ. ಸಾಮಾಜಿಕ, ಪ್ರಾದೇಶಿಕ ಪ್ರಾತಿನಿಧ್ಯ ಎಲ್ಲಾ ವಿಚಾರಗಳು ಇವುಗಳ ಬಗ್ಗೆ ಚರ್ಚೆಯಾಗಿದ್ದು ಶೀಘ್ರದಲ್ಲಿ ವಿಸ್ತರಣೆ ಆಗುವ ನಿರೀಕ್ಷೆಯಿದೆ ಎಂದರು.

ಶಿವಮೊಗ್ಗ : ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ.08 ರಂದು ಬ್ಯಾಂಕ್-1 ರ ಬ್ರೇಕರ್‍ಗಳ ಸ್ಥಳಾಂತರ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18 & ಎಂಸಿಎಫ್-20 ಮಾರ್ಗಗಳ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತ್ರಿ ಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್, ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‍ಆರ್‍ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರೆಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

2022-23 ನೇ ಸಾಲಿನ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಾದ, ಐಐಎಮ್, ಐಐಟಿ, ಐಐಎಸ್‍ಸಿ, ಐಐಐಟಿ ಗಳು, ಎನ್‍ಐಟಿ ಗಳು, ಐಐಎಸ್‍ಇಆರ್ ಗಳು, ಎಐಐಎಂಎಸ್, ಎನ್‍ಎಲ್‍ಯು, ಐಎಸ್‍ಎಮ್, ಐಐಪಿ, ಐಎಸ್‍ಐ, ಜೆಐಪಿಎಮ್‍ಇಆರ್ ಅಥವಾ ಎಸ್‍ಪಿಎ ಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೊಜನೆಯ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನವಾಗಿರುತ್ತದೆ.

ಕಾರ್ಯಕ್ರಮಗಳ ವಿವರ ಹಾಗೂ ಪ್ರೋತ್ಸಾಹಧನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಆನ್‍ಲೈನ್ ಮೂಲಕ ಸಲ್ಲಿಸುವ ವಿಳಾಸ https://bcwd.karnataka.gov.in ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ-8050770004/08182-222129 ಅಥವಾ ಇಮೇಲ್-bcwdhelpline@gmail.com ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.