ಕಲ್ಯಾಣ ಕರ್ನಾಟಕದ ರೈತರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಮನೆ ಬಾಗಿಲಿಗೇ ಬರಲಿವೆ 'ಪಶು ಸಂಚಾರಿ ಚಿಕಿತ್ಸಾಲಯ

ಕಲ್ಯಾಣ ಕರ್ನಾಟಕದ ರೈತರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಮನೆ ಬಾಗಿಲಿಗೇ ಬರಲಿವೆ 'ಪಶು ಸಂಚಾರಿ ಚಿಕಿತ್ಸಾಲಯ

ಲಬುರಗಿ : ರೈತರು ಎಂದೆಂದಿಗೂ ಭಾರತದ ಬೆನ್ನೆಲುಬಾಗಿದ್ದಾರೆ. ಈ ನಿಟ್ಟಿನಲ್ಲಿ ಹೈನುಗಾರಿಕೆಯಲ್ಲಿ ತೊಡಗಿದ್ದ, ರೈತರ ಅನುಕೂಲಕ್ಕಾಗಿ ಪಶು ಸಂಚಾರಿ ಚಿಕಿತ್ಸಾಲಯಗಳನ್ನು ಆರಂಭಿಸಲು ರಾಜ್ಯಸರ್ಕಾರ ನಿರ್ಧಾರಿಸಿದೆ.

ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ 68 ಸಂಚಾರಿ ಪಶು ಚಿಕಿತ್ಸಾಲಯಗಳು ಆರಂಭಿಸಲು ಪ್ಲ್ಯಾನ್‌ ಮಾಡಿದ್ದು .

ಜಾನುವಾರುಗಳಿಗೆ ಮನೆ ಬಾಗಿಲಲ್ಲೇ ಚಿಕಿತ್ಸೆ ನೀಡಲು ಆರಂಭಿಸಲಿದೆ . ಪ್ರಾಣಿಗಳ ಆರೋಗ್ಯ ಮತ್ತು ರೋಗ ನಿಯಂತ್ರಣ ಯೋಜನೆಯಡಿ ಪ್ರಾಣಿಗಳ ಸಂಚಾರಿ ಚಿಕಿತ್ಸಾಲಯಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಪಶು ಸಂಚಾರಿ ಚಿಕಿತ್ಸಾಲಯಕ್ಕೆ ಕೇಂದ್ರ ಸರ್ಕಾರವು 275 ಸಂಚಾರಿ ಪಶು ಚಿಕಿತ್ಸಾಲಯಗಳನ್ನು ನಡೆಸಲು ಆರ್ಥಿಕ ನೆರವು ನೀಡಲಿದೆ. ಅವುಗಳಲ್ಲಿ 68 ವಾಹನಗಳು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಾರ್ಯನಿರ್ವಹಿಸಲಿವೆ. ಉಳಿದ ಚಿಕಿತ್ಸಾಲಯಗಳು ರಾಜ್ಯದ ಇತರ ಭಾಗಗಳಲ್ಲಿ ಕಾರ್ಯನಿರ್ವಹಿಸಲಿವೆ. 275 ಸಂಚಾರಿ ಪಶು ಚಿಕಿತ್ಸಾಲಯಗಳಲ್ಲಿ ಬೆಂಗಳೂರು ವಿಭಾಗಕ್ಕೆ ಎಪ್ಪತ್ತು ವಾಹನಗಳು, ಬೆಳಗಾವಿ ವಿಭಾಗಕ್ಕೆ 82 ಸಂಚಾರಿ ಕ್ಲಿನಿಕ್‌ಗಳನ್ನು ಮಂಜೂರು ಮಾಡಲಾಗುವುದು ಎಂದು ತಿಳಿಸಲಾಗಿದೆ.

ಪಶು ಸಂಚಾರಿ ಚಿಕಿತ್ಸಾಲಯ ಸೌಲಭ್ಯ ಪಡೆಯಲು ರೈತರು ರೈತರು ಟೋಲ್ ಫ್ರೀ ಸಂಖ್ಯೆ-1962 ಅಥವಾ 8277100200 ಕಂಟ್ರೋಲ್ ರೂಮ್ ಸಂಖ್ಯೆಗೆ ಕರೆ ಮಾಡಬಹುದು. ಇದು ಮೊಬೈಲ್ ಕ್ಲಿನಿಕ್ ಅನ್ನು ರೈತರ ಮನೆ ಬಾಗಿಲಿಗೆ ಕಳುಹಿಸುತ್ತದೆ. ಪ್ರತಿ ಸಂಚಾರಿ ಚಿಕಿತ್ಸಾಲಯದಲ್ಲಿ ಪಶುವೈದ್ಯರು ಮತ್ತು ಅವರ ಸಹಾಯಕರು ಇರಲಿದ್ದಾರೆ.