ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರದಲ್ಲೇ ರಾಜ್ಯಾದ್ಯಂತ `ಫ್ಯಾಮಿಲಿ ಮಾರ್ಟ್' ಆರಂಭ

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರದಲ್ಲೇ ರಾಜ್ಯಾದ್ಯಂತ `ಫ್ಯಾಮಿಲಿ ಮಾರ್ಟ್' ಆರಂಭ

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಫ್ಯಾಮಿಲಿ ಮಾರ್ಟ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.

ಈ ಕುರಿತು ಸಿ.ಎಸ್. ಷಡಾಕ್ಷರಿ ಮಾಹಿತಿ ನೀಡಿದ್ದು, ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಮಾರ್ಟ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದ್ದು, ಈ ಮಾರ್ಟ್ ನಲ್ಲಿ ರಿಯಾಯತಿ ದರದಲ್ಲಿ ಗೃಹೋಪಯೋಗಿ ವಸ್ತುಗಳು ಲಭ್ಯವಾಗುವಂತೆ ಮಾಡಲಾಗುತ್ತದೆ. ಈಗಾಗಲೇ ಶಿವಮೊಗ್ಗದಲ್ಲಿ 22 ಕೋಟಿ ರೂ. ಅನುದಾನದಲ್ಲಿ ಬೃಹತ್ ಭವನ ನಿರ್ಮಾಣ ಮಾಡಲಾಗಿದ್ದು, ಫೆ.4ರಂದು ರಾಜ್ಯಮಟ್ಟದ ಸರ್ಕಾರಿ ನೌಕರರ ಸಮಾವೇಶ ಆಯೋಜಿಸಿದ್ದು, ಇದೇ ಸಂದರ್ಭದಲ್ಲಿ ಮಾರ್ಟ್ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿಯೂ ಮಾರ್ಟ್ ನಿರ್ಮಾಣಕ್ಕೆ 200 ಕೋಟಿ ರೂ. ಗಳ ಯೋಜನೆಯನ್ನು ರೂಪಿಸಲಾಗುತ್ತಿದೆ. ಇದರಿಂದ ಒಂದೇ ಸೂರಿನಡಿ ರಿಯಾಯತಿ ದರದಲ್ಲಿ ಗೃಹೋಪಯೋಗಿ ವಸ್ತುಗಳು ಲಭ್ಯವಾಗಲಿವೆ.ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇತ ಫ್ಯಾಮಿಲಿ ಮಾರ್ಟ್ ವೊಂದನ್ನು ಆರಂಭಿಸುತ್ತಿದ್ದು, ಶೇ.10-60ರಷ್ಟು ರಿಯಾಯಿತಿಯಲ್ಲಿ ಸರ್ಕಾರಿ ನೌಕರರು ಅಗತ್ಯ ವಸ್ತುಗಳು ಮತ್ತು ದಿನಸಿ ಸಾಮಾಗ್ರಿಗಳನ್ನು ಖರೀದಿಸಬಹುದಾಗಿದೆ.