ಶ್ರೀಗಳ ಬಗ್ಗೆ ಹಗುರ ಮಾತು ಬೇಡ; ನಿರಾಣಿ

ಬೆಳಗಾವಿ: ತಮ್ಮ ಜೀವವವನ್ನೇ ತ್ಯಾಗ ಮಾಡಿ ಸಮಾಜ ಸುಧಾರಣೆಗಾಗಿ ಶ್ರಮಿಸುತ್ತಿರುವ ಧಾರ್ಮಿಕ ಮುಖಂಡರ ಬಗ್ಗೆ ಯಾರೊಬ್ಬರೂ ಹಗುರವಾಗಿ ಮಾತನಾಡಬಾರದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಚಿವ ಮುರುಗೇಶ್ ನಿರಾಣಿ ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಚನಾನಂದ ಶ್ರೀಗಳೇ ಇರಲಿ ಅಥವಾ ಯಾರೇ ಇರಲಿ ಸಮಾಜ ಸುಧಾರಣೆಗೆ ಶ್ರಮಿಸುತ್ತಿರುವ ಧಾರ್ಮಿಕ ಮುಖಂಡರ ಬಗ್ಗೆ ಲಘುವಾಗಿ ಮಾತನಾಡಬೇಕಾದ ಅಗತ್ಯವಿಲ್ಲಎಂದು ಹೇಳಿದರು.