ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಸೌಧಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿ, ಬಜೆಟ್ ಪುಸ್ತಕವನ್ನು ಪ್ರದರ್ಶಿಸಿದ್ದು, ಕೆಲವೇ ಕ್ಷಣಗಳಲ್ಲಿ ಬೆಳಗ್ಗೆ 10.15 ಕ್ಕೆ ತಮ್ಮ ಎರಡನೇ ಬಜೆಟ್ ಮಂಡಿಸಲಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದೆ.
ಇನ್ನು ಇಂದು ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜನಪ್ರಿಯ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದ್ದು, ಬಜೆಟ್ ಮಂಡನೆ ಗೂಮುನ್ನ ದೇವಾಲಯಕ್ಕೆ ತೆರಳಿರುವ ಸಿಎಂ ನಾಡಿನ ಜನರ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ.