ಸಂಸದೆಯಾಗಿ ಪ್ರಮಾಣವಚನ ಸ್ವಿಕರಿಸಿದ ಡಿಂಪಲ್ ಯಾದವ್
ನವದೆಹಲಿ: ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಅವರು ಲೋಕಸಭೆಯ ಸಂಸದರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಕಳೆದ ಅಕ್ಟೋಬರ್‌ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ಉತ್ತರ ಪ್ರದೇಶದ ಮೈನ್‌ಪುರಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು. ಮೈನ್‌ಪುರಿ ಸಂಸದೀಯ ಸ್ಥಾನದಿಂದ ಆಯ್ಕೆಯಾದ ನಂತರ ಸೋಮವಾರ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು.