ʻಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮ, ಪ್ರತಿಯೊಬ್ಬರೂ ಗೌರವಿಸಬೇಕು:ʼ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಲಖನೌ: 'ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮವಾಗಿದೆ' ಇದನ್ನು ಪ್ರತಿಯೊಬ್ಬ ನಾಗರಿಕರು ಗೌರವಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ನಿನ್ನೆ ರಾಜಸ್ಥಾನದ ಭಿನ್ಮಾಲ್‌ನಲ್ಲಿರುವ ನೀಲಕಂಠ ಮಹಾದೇವ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಅದರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು 'ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮವಾಗಿದೆ' ಇದನ್ನು ಪ್ರತಿಯೊಬ್ಬ ನಾಗರಿಕರು ಗೌರವಿಸಬೇಕು ಎಂದಿದ್ದಾರೆ.
ಈ ವೇಳೆ ಯೋಗಿ, ಅಯೋಧ್ಯೆಯ ರಾಮಮಂದಿರದ ಮಾದರಿಯಲ್ಲಿ ಅಪವಿತ್ರಗೊಂಡ ಧಾರ್ಮಿಕ ಸ್ಥಳಗಳನ್ನು ಪುನಃಸ್ಥಾಪಿಸಲು ಅಭಿಯಾನವನ್ನು ನಡೆಸುವಂತೆ ಜನರನ್ನು ಒತ್ತಾಯಿಸಿದರು.
ಯಾವುದೇ ಅವಧಿಯಲ್ಲಿ ನಮ್ಮ ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸಿದ್ದರೆ, 500 ವರ್ಷಗಳ ನಂತರ ಭವ್ಯವಾದ ರಾಮನ ಮಂದಿರ ನಿರ್ಮಾಣ ನಡೆಯುತ್ತಿರುವ ಅಯೋಧ್ಯೆಯ ಮಾದರಿಯಲ್ಲಿ ಅವುಗಳ ಜೀರ್ಣೋದ್ಧಾರಕ್ಕಾಗಿ ಅಭಿಯಾನವನ್ನು ಪ್ರಾರಂಭಿಸಬೇಕು ಎಂದು ಹೇಳಿದರು.