ಸಸಾಲಟ್ಟಿ ಶಿವಲಿಂಗೇಶ್ವರ ಏತ ನೀರಾವರಿಯ ಎರಡನೇ ಹಂತಕ್ಕೆ ಸಂಪುಟ ಒಪ್ಪಿಗೆ

ಸಸಾಲಟ್ಟಿ ಶಿವಲಿಂಗೇಶ್ವರ ಏತ ನೀರಾವರಿಯ ಎರಡನೇ ಹಂತಕ್ಕೆ ಸಂಪುಟ ಒಪ್ಪಿಗೆ

ಸಸಾಲಟ್ಟಿ ಶಿವಲಿಂಗೇಶ್ವರ ಏತ ನೀರಾವರಿಯ ಎರಡನೇ ಹಂತಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕು ವ್ಯಾಪ್ತಿ ಅಡಿಯ ಬಾಧಿತ ಅಚ್ಚುಕಟ್ಟು ಪ್ರದೇಶಗಳಿಗೆ ಸಮರ್ಪಕವಾಗಿ ನೀರನ್ನು ಪೂರೈಸುವ ಯೋಜನೆ ಇದು. ಈ ಯೋಜನೆಗೆ 209 ಕೋಟಿ ರೂ. ಅಂದಾಜಿಸಲಾಗಿದ್ದು, ಇದರ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ.