ಸಿದ್ದಗಂಗಾ ಶ್ರೀಗಳು' ನಾಡಿಗೆ ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾದುದು : ಸಿಎಂ ಬೊಮ್ಮಾಯಿ

ಬೆಂಗಳೂರು : ಪೂಜ್ಯರು ಈ ನಾಡಿಗೆ ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾದುದು. ಫೆಬ್ರವರಿ ತಿಂಗಳಿನಲ್ಲಿ ರಾಜ್ಯ ಸರ್ಕಾರದಿಂದ 'ದಾಸೋಹ ದಿನ' ಆಚರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿಗಳ ಪುಣ್ಯಸ್ಮರಣೆಯ ಅಂಗವಾಗಿ, ಶ್ರೀ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ತೆರಳಿ, ಪವಿತ್ರ ಗದ್ದುಗೆಯ ದರ್ಶನವನ್ನು ಪಡೆದುಕೊಂಡ ಸಿಎಂ ಬೊಮ್ಮಾಯಿ ಮಾತನಾಡಿದರು. ಪೂಜ್ಯರು ಈ ನಾಡಿಗೆ ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾದುದು ಎಂದರು.
ಫೆಬ್ರವರಿ ತಿಂಗಳಿನಲ್ಲಿ ರಾಜ್ಯ ಸರ್ಕಾರದಿಂದ 'ದಾಸೋಹ ದಿನ' ಆಚರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಫೆಬ್ರವರಿ ತಿಂಗಳಿನಲ್ಲಿ ಸರ್ಕಾರದಿಂದ ದಾಸೋಹ ದಿನ ಆಚರಣೆ ಮಾಡಿ ಶ್ರೀಗಳಿಗೆ ಗೌರವ ಸಲ್ಲಿಸಲಾಗುತ್ತದೆ ಎಂದರು. ಇವತ್ತು ಶ್ರೀಗಳ ದಾಸೋಹ ದಿನ ಬಹಳ ವಿಶಿಷ್ಟವಾಗಿ ಇಡೀ ರಾಜ್ಯದಲ್ಲಿ ಆಚರಣೆಯಾಗಬೇಕು. ವಿಶೇಷವಾಗಿ ದೊಡ್ಡ ಪ್ರಮಾಣದಲ್ಲಿ ದಾಸೋಹ ಮಾಡುತ್ತಿರುವ ಮಠಮಾನ್ಯಗಳಲ್ಲಿ ಈ ದಿನವನ್ನು ಆಚರಣೆ ಮಾಡಬೇಕೆಂದು ತೀರ್ಮಾನಿಸಲಾಗುವುದು ಎಂದರು.