ಸಿದ್ದಗಂಗಾ ಶ್ರೀಗಳ 'ವಿಶ್ವಜ್ಯೋತಿ ಪುಸ್ತಕ' ಬಿಡುಗಡೆ ಮಾಡಿದ ಸಚಿವ ಮಾಧುಸ್ವಾಮಿ

ಸಿದ್ದಗಂಗಾ ಶ್ರೀಗಳ 'ವಿಶ್ವಜ್ಯೋತಿ ಪುಸ್ತಕ' ಬಿಡುಗಡೆ ಮಾಡಿದ ಸಚಿವ ಮಾಧುಸ್ವಾಮಿ

ತುಮಕೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಲಿಂಗೈಕ್ಯ ಡಾ. ಶ್ರೀ ಶಿವಕುಮಾರ್ ಮಹಾಸ್ವಾಮಿಗಳ ಇಂದು ನಾಲ್ಕನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಗಿದೆ.

ಈ ವೇಳೆ ಕಾನೂನು ಸಚಿವ ಮಾಧುಸ್ವಾಮಿ ಸಿದ್ದಗಂಗಾ ಮಠದಲ್ಲಿ ಮಠದಲ್ಲಿ 'ವಿಶ್ವಜ್ಯೋತಿ ಪುಸ್ತಕ' ಬಿಡುಗಡೆ ಮಾಡಿದ್ದಾರೆ.

ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ.ಶಿವಕುಮಾರ್ ಶ್ರೀಗಳಿಗೆ 4ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಸ್ವಾಮೀಜಿಗಳ ಕುರಿತ ಪುಸ್ತಕ ಬಿಡುಗಡೆ ಮಾಡಿದ್ದಾರೆ.

ಈ ಹಿನ್ನೆಲೆ ಬೆಳಗ್ಗೆಯಿಂದಲೇ ಮಠದಲ್ಲಿ ಶ್ರೀಗಳ ಗದ್ದುಗೆಗೆ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜೆ ನಡೆದಿದೆ. ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಜೆಸಿ ಮಾಧುಸ್ವಾಮಿ, ವಿ. ಸೋಮಣ್ಣ, ಆರಗ ಜ್ಞಾನೇಂದ್ರ, ಬಿ.ಸಿ ನಾಗೇಶ್, ಡಾ.ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್, ಸಿ.ಸಿ.ಪಾಟೀಲ್, ಸಂಸದರಾದ ಬಸವರಾಜ್, ತೇಜಸ್ವಿ ಸೂರ್ಯ, ಕೇಂದ್ರ ಸಚಿವ ಭಗವಂತ ಖೂಬಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್,ವಿವಿಧ ಪಕ್ಷಗಳ ಶಾಸಕರು, ನಾಯಕರು ಮತ್ತು ವಿವಿಧ ಮಠಾಧೀಶರು ಭಾಗವಹಿಸಿದ್ದಾರೆ.