ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದ್ರೂ, ಅವರನ್ನು ಸೋಲಿಸಲು ಎಲ್ಲರೂ ಒಂದಾಗುತ್ತಾರೆ' : ಶಾಸಕ ಯತೀಂದ್ರ

ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದ್ರೂ, ಅವರನ್ನು ಸೋಲಿಸಲು ಎಲ್ಲರೂ ಒಂದಾಗುತ್ತಾರೆ' : ಶಾಸಕ ಯತೀಂದ್ರ

ಮೈಸೂರು : ಈ ಬಾರಿಯ ಚುನಾವಣೆಯಲ್ಲಿ ನಾನು ವರುಣಾ ಸೇರಿದಂತೆ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ಶಾಸಕ ಡಾ. ಯತೀಂದ್ರ ಹೇಳಿದ್ದರು. ಇದೀಗ ತಂದೆ ಸಿದ್ದರಾಮಯ್ಯ ಸ್ಪರ್ಧೆ ಕುರಿತು ಯತೀಂದ್ರ ಕಳವಳ ವ್ಯಕ್ತಪಡಿಸಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಕೈಗೊಂಡಿರುವ ಯತೀಂದ್ರ ' ಸಿದ್ದರಾಮಯ್ಯ ಅವರನ್ನು ಸೋಲಿಸಲು ಎಲ್ಲರೂ ಒಂದಾಗುತ್ತಾರೆ, ಅದಕ್ಕೆ ಮತದಾರರು ಅವಕಾಶ ಕೊಡಬಾರದು. ಬಹಳ ಎಚ್ಚರಿಕೆಯಿಂದ ಮತ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಎಲ್ಲೇ ನಿಂತರೂ ಅವರನ್ನು ಸೋಲಿಸಲು ಎಲ್ಲರೂ ಒಟ್ಟಾಗುತ್ತಾರೆ, ಸಿದ್ದರಾಮಯ್ಯ ಕೊನೆ ಚುನಾವಣೆಯಲ್ಲಿ ಗೆದ್ದು ಗೌರವಯುತವಾಗಿ ನಿವೃತ್ತಿ ಪಡೆಯಬೇಕು, ಮತದಾರರು ಬಹಳ ಎಚ್ಚರಿಕೆಯಿಂದ ಮತ ನೀಡಿ ಎಂದು ಶಾಸಕ ಯತೀಂದ್ರ ಮನವಿ ಮಾಡಿದ್ದಾರೆ.

ತಂದೆ ಸಿದ್ದರಾಮಯ್ಯ ಸಿಎಂ ಆಗಬೇಕೆಂಬುದು ನನ್ನ ಆಸೆ : ಯತೀಂದ್ರ

ನಮ್ಮ ತಂದೆಗೆ ಈ ಬಾರಿಯ ಚುನಾವಣೆ ಕೊನೆಯ ಚುನಾವಣೆ. ನಮ್ಮ ತಂದೆ ಸಿದ್ದರಾಮಯ್ಯ ಸಿಎಂ ಆಗಬೇಕೆಂಬುದು ನನ್ನ ಆಸೆ. ಜನವರಿಂದಲೇ ವರುಣಾ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದೇನೆ. ವರುಣಾ ಕ್ಷೇತ್ರ ಯಾವುದೋ ಒಬ್ಬ ವ್ಯಕ್ತಿಗೆ ಸೇರಿದ್ದಲ್ಲ. ಜನರಿಗೆ ಸೇರಿದ್ದು. ವರುಣಾ ಕ್ಷೇತ್ರಕ್ಕೆ ತಂದೆಯವರು ನಿಲ್ಲಬೇಕೆಂಬುದು ಕ್ಷೇತ್ರದ ಜನರ ನಿರ್ಧಾರವಾಗಿದೆ ಎಂದರು.

ಒಬ್ಬ ಮಗನಾಗಿ ತಂದೆ ಸಿಎಂ ಆಗಲಿ ಎಂದು ಆಸೆ ಪಡುವುದು ತಪ್ಪಾ..ಖಂಡಿತ ನನ್ನ ತಂದೆ ಮತ್ತೆ ಸಿಎಂ ಆಗಬೇಕು ಎಂದು ಆಸೆಪಡುತ್ತೇನೆ ಎಂದು ಹೇಳಿದ್ದಾರೆ. ಮತ್ತೆ ಸಿಎಂ ಆದರೆ ರಾಜ್ಯವನ್ನು ಇನ್ನಷ್ಟು ಅಭಿವೃದ್ದಿಪಥದತ್ತ ಕೊಂಡೊಯ್ಯಲಿದ್ದಾರೆ ಎಂದು ಹೇಳಿದರು.ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಹಾಗೂ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಇನ್ನೂ ಕೂಡ ಕ್ಷೇತ್ರ ಅಂತಿಮವಾಗಿಲ್ಲ.

JDS' ಗೆ 100 ಸೀಟು ಬಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ : 'HDK' ಗೆ ಸಚಿವ ಸುಧಾಕರ್ ಸವಾಲ್

ಚಿಕ್ಕಬಳ್ಳಾಪುರ : ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಗೆ 100 ಸೀಟು ಬಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಸುಧಾಕರ್ ಹೆಚ್ ಡಿ ಕುಮಾರಸ್ವಾಮಿಗೆ ಸವಾಲ್ ಹಾಕಿದ್ದಾರೆ.ಇಂದು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಧಾಕರ್ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ಈ ಬಾರಿ ಬಿಜೆಪಿ 120 ಅಲ್ಲ, 100 ಸ್ಥಾನ ಕೂಡ ಬರಲ್ಲ, ಬಿಜೆಪಿ ಹಾಗೂ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಕುಮಾರಸ್ವಾಮಿಗೆ ಸುಧಾಕರ್ ತಿರುಗೇಟು ನೀಡಿದರು.

ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಗೆ 100 ಸೀಟು ಬಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ, ಯಾವುದೇ ಕಾರಣಕ್ಕೂ ಜೆಡಿಎಸ್ ಹಾಗೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಈ ಬಾರಿ ಸ್ಪಷ್ಟಬಹುತದೊಂದಿಗೆ ನಾವು ಅಧಿಕಾರಕ್ಕೆ ಬರುತ್ತೇವೆ. ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಸರಿಯಾದ ಅಭ್ಯರ್ಥಿಗಳೇ ಇಲ್ಲ ಎಂದು ಟಾಂಗ್ ನೀಡಿದರು