ಸಿದ್ದು ಕಂಡ್ರೆ ಮೋದಿಗೆ ಭಯ- ಅದಕ್ಕೇ ರಾಜ್ಯಕ್ಕೆ ಓಡೋಡಿ ಬರ್ತಿದ್ದಾರೆ: ಕೈ ಶಾಸಕ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಿದ್ದರಾಮಯ್ಯ ಅವರನ್ನು ಕಂಡರೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯ ಎಂದು ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಚಾಮರಾಜನಗರದಲ್ಲಿಂದು ಮಾತನಾಡಿದ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ, ಕೇಂದ್ರದಲ್ಲಿ ಮಾಡುವ ಕೆಲಸ ಅಷ್ಟಿದೆ, ಆದರೆ ಸಿದ್ದರಾಮಯ್ಯ ಅವರಿಂದಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಓಡೋಡಿ ಬರ್ತಿದ್ದಾರೆ.
ಇದೇ ವೇಳೆವಿರುದ್ಧ ಅಸಮಾಧಾನ ಹೊರಹಾಕಿದ ಶಾಸಕ ಪುಟ್ಟರಂಗಶೆಟ್ಟರು, ನಾನು ಸಚಿವನಾಗಿದ್ದ ವೇಳೆ ನನ್ನ ಕಚೇರಿಯಲ್ಲಿ ಹಣ ಸಿಕ್ಕಿತು ಎಂದು ಸಿಎಂ ಹೇಳಿದ್ದು ಅವರೇನಾದರೂ ಬಂದು ನೋಡಿದ್ದರೇ..? ಸ್ಥಾನದ ಘನತೆ ಅರಿತು ಮಾತನಾಡಬೇಕು, ದಾಖಲಾತಿ ತರಿಸಿಕೊಂಡು ಹಣ ಸಿಕ್ಕಿತೆಂದು ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು.