ಸಿದ್ದು ನಿಜ ಕನಸು' ಪುಸ್ತಕ ವಿವಾದ : ಮಾನನಷ್ಟ ಮೊಕದ್ದಮೆ ಹೂಡುವ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ಇಂದು ಬಿಜೆಪಿ ಸಿದ್ದು ನಿಜ ಕನಸು ಎಂಬ ಪುಸ್ತಕ ಬಿಡುಗಡೆಗೆ ಮುಂದಾಗಿರುವ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ.
ಇನ್ನು ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ ವಿರೋಧಿಸಿ ಇಂದು ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕುರಿತಾಗಿ ಸಿದ್ದು ನಿಜ ಕನಸುಗಳು ಪುಸ್ತಕ ಇದೀಗ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಸೋಮವಾರ ಮಧ್ಯಾಹ್ನ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಸಚಿವ ಡಾ. ಅಶ್ವತ್ಥ ನಾರಾಯಣ ಅವರು ಈ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.