ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಜನಸಾಗರ : ವಿಷಲ್‌ ಹೊಡೆದು ಭಕ್ತರನ್ನು ನಿಯಂತ್ರಿಸುತ್ತಿರೋ ʻಸಚಿವ ಶ್ರೀರಾಮುಲುʼ

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಜನಸಾಗರ : ವಿಷಲ್‌ ಹೊಡೆದು ಭಕ್ತರನ್ನು ನಿಯಂತ್ರಿಸುತ್ತಿರೋ ʻಸಚಿವ ಶ್ರೀರಾಮುಲುʼ

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಈ ಸಂದರ್ಭದಲ್ಲಿ ವಿಷಲ್‌ ಹೊಡೆದು ಭಕ್ತರನ್ನು ನಿಯಂತ್ರಿಸಲು ಮುಂದಾದ ಸಚಿವ ಶ್ರೀರಾಮುಲು ಮುಂದಾಗಿದ್ದಾರೆ. ಈಗಾಗಲೇ 15 ಲಕ್ಷ ಜನರು ಬಂದು ಶ್ರೀಗಳ ದರ್ಶನ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದಾರೆ. ಪ್ರತಿ ಮೂಲೆ ಮೂಲೆ, ಹಳ್ಳಿಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಇನ್ನು ಅಪಾರ ಸಂಖ್ಯೆ ಜನರು ಬರುವ ಸಾಧ್ಯತೆ ಇದೆ. ಇನ್ನು ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ. ಅಂತಿಮ ದರ್ಶನ ಮುಗಿಯದಿದ್ಗರೇ ನಾಳೆಯೂ ದರ್ಶಕ್ಕೆ ಅವಕಾಶ ನೀಡಲಾಗುತ್ತದೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ವಿಜಯಪುರ ಡಿಸಿ ವಿಜಯ್‌ ಮಹಾಂತೇಶ್‌ ಆದೇಶ ನೀಡಿದ್ದಾರೆ