ಸಿದ್ಧರಾಮಯ್ಯ ಮೂಲೆ ಗುಂಪು ಮಾಡಲು ಕಾಂಗ್ರೆಸ್ ನಲ್ಲೇ ಹುನ್ನಾರ.? ಈ ಬಗ್ಗೆ ರಮೇಶ್ ಕುಮಾರ್ ಹೇಳಿದ್ದೇನು ಗೊತ್ತಾ?

ಸಿದ್ಧರಾಮಯ್ಯ ಮೂಲೆ ಗುಂಪು ಮಾಡಲು ಕಾಂಗ್ರೆಸ್ ನಲ್ಲೇ ಹುನ್ನಾರ.? ಈ ಬಗ್ಗೆ ರಮೇಶ್ ಕುಮಾರ್ ಹೇಳಿದ್ದೇನು ಗೊತ್ತಾ?

ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿಯೇ ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ಅವರನ್ನು ಮೂಲೆ ಗುಂಪಾಗಿಸೋ ಮಾತು ಕೇಳಿ ಬಂದಿದೆ. ಅವರನ್ನು ಮೂಲೆ ಗುಂಪು ಮಾಡಿದ್ದೇ ಆದ್ರೇ ರಾಜ್ಯದಲ್ಲಿ ಆಂಧ್ರಪ್ರದೇಶದಲ್ಲಿ ಆದಂತ ಗತಿ ಕಾಂಗ್ರೆಸ್ ಗೆ ಉಂಟಾಗಲಿದೆ ಎಂಬುದಾಗಿ ಕಾಂಗ್ರೆಸ್ ನ ಹಿರಿಯ ಶಾಸಕ ರಮೇಶ್ ಕುಮಾರ್ ( Congress Senior MLA Ramesh Kumar ) ಹೇಳಿದ್ದಾರೆ.

ಕೋಲಾರದ ಶ್ರೀನಿವಾಸಪುರದಲ್ಲಿ ಇಂದು ನಡೆದಂತ ಕುರುಬರ ಸಂಘದ ಸಭೆಯಲ್ಲಿ ಮಾತನಾಡಿದಂತ ಅವರು, ಸಿದ್ಧರಾಮಯ್ಯ ಅವರನ್ನು ಕಾಂಗ್ರೆಸ್ ನಲ್ಲಿ ಮೂಲೆಗುಂಪು ಮಾಡಿದ್ರೇ ಕಷ್ಟ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಇರುವುದಿಲ್ಲ ಎಂಬುದಾಗಿ ಪರೋಕ್ಷವಾಗಿ ಕಾಂಗ್ರೆಸ್ ಹೈಕಮಾಂಡ್ ಗೆ ಎಚ್ಚರಿಕೆ ನೀಡಿದರು.

ಸಿದ್ಧರಾಮಯ್ಯ ಅವರನ್ನು ಮೂಲೆಗುಂಪು ಮಾಡಿದ್ರೇ ಆಂಧ್ರದಲ್ಲಿ ಆದಂತ ಸ್ಥಿತಿ ಕರ್ನಾಟಕದಲ್ಲಿ ಉಂಟಾಗಲಿದೆ. ಅವರನ್ನು ಮನವೊಲಿಸಬೇಕಾಗುತ್ತದೆ. ಸಿದ್ಧರಾಮಯ್ಯ ಅವರನ್ನು ರಾಹುಲ್ ಗಾಂಧಿಯೇ ಮನವೊಲಿಸಬೇಕಾಗುತ್ತದೆ. ಮನವೊಲಿಸಿ ವಿಪಕ್ಷ ಸ್ಥಾನದಲ್ಲಿ ಅವರನ್ನು ಕೂರಿಸಬೇಕಾಗುತ್ತದೆ ಎಂದರು.

ಕೋಲಾರಕ್ಕೆ ಸಿದ್ಧರಾಮಯ್ಯ ಬಾರದೇ ಇದ್ದರೇ ಕಾಂಗ್ರೆಸ್ ಮುಳುಗುತ್ತದೆ. ಕೋಲಾರದಲ್ಲಿ ಕಾಂಗ್ರೆಸ್ ಸಂಪೂರ್ಣ ಮುಳುಗಿ ಹೋಗುತ್ತದೆ ಎಂಬುದಾಗಿ ಕಾಂಗ್ರೆಸ್ ಹಿರಿಯ ಶಾಸಕ ರಮೇಶ್ ಕುಮಾರ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ನಲ್ಲಿ ಸಿದ್ಧರಾಮಯ್ಯ ಮೂಲೆ ಗುಂಪು ಮಾಡಲಾಗುತ್ತಿದ್ಯಾ ಎನ್ನುವಂತೆ ಸುಳಿವು ನೀಡಿದ್ದಾರೆ.

ಶಿವಮೊಗ್ಗ: ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ - ಡಿಸಿ ಖಡಕ್ ಸೂಚನೆ

ಶಿವಮೊಗ್ಗ : ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಚುನಾವಣಾ ನಿಯೋಜಿತ ಎಲ್ಲ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಹಾಗೂ ರಜಾ ದಿನಗಳಂದು ಹೆಚ್ಚು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣಾ ಸಿದ್ದತೆ ಕುರಿತು ಸಲಹೆ-ಸೂಚನೆಗಳನ್ನು ನೀಡಿದರು.

ಎಲ್ಲ ಚುನಾವಣಾಧಿಕಾರಿಗಳು ಮತಗಟ್ಟೆಗಳಿಗೆ ತೆರಳಿ ಮತಗಟ್ಟೆಗಳ ಕುರಿತು ಖಾತ್ರಿಪಡಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆ ಕುರಿತು ಈಗಲೇ ಸಮರ್ಪಕವಾದ ಯೋಜನೆ ಹಾಕಿಕೊಂಡು ಕರ್ತವ್ಯ ನಿರ್ವಹಿಸಬೇಕು. ಪ್ರತಿ ಮತಗಟ್ಟೆಗೆ ಪಂಚಾಯಿತಿ ಅಥವಾ ಇತರೆ ಸ್ಥಳೀಯ ಸಂಸ್ಥೆಗಳಿಂದ ಒಬ್ಬರನ್ನು ನಿಯೋಜಿಸಬೇಕು. ಇಓ, ಚೀಫ್ ಆಫೀಸರ್, ಪಿಡಿಓ ಗಳು ಮತಗಟ್ಟೆಗಳು ಹಾಗೂ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ/ಸಿಬ್ಬಂದಿಗಳ ಎಲ್ಲ ರೀತಿಯ ಮೂಲಭೂತ ವ್ಯವಸ್ಥೆಗಳ ಕುರಿತು ನಿಗಾ ವಹಿಸಿ, ಮುತುವರ್ಜಿಯಿಂದ ವ್ಯವಸ್ಥೆ ಮಾಡಬೇಕು.

ಎಲ್ಲ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳು, ಚುನಾವಣಾ ಸಿಬ್ಬಂದಿಗಳಿಗೆ ನೀರು, ಊಟದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿಯೋಜಿತ ಅಧಿಕಾರಿಗಳು ಮಾಡಬೇಕು. ಕೆಲವು ದೂರದ ಹಳ್ಳಿಗಳಲ್ಲಿ ಕುಡಿಯುವ ನೀರು ಇತರೆ ಸೌಕರ್ಯಗಳು ಇರುವುದಿಲ್ಲ. ಅಲ್ಲಿ ಹೆಚ್ಚಿನ ಕಾಳಜಿ ವಹಿಸಿ ವ್ಯವಸ್ಥೆ ಮಾಡಬೇಕು. ಹಾಗೂ ಕ್ಲಸ್ಟರ್ ಮತಗಟ್ಟೆ ಅಂದರೆ ಮೂರು ಮತ್ತು ಹೆಚ್ಚು ಮತಗಟ್ಟೆ ಇರುವೆಡೆ ಪೆಂಡಾಲ್ ಸೇರಿದಂತೆ ಮೂಲಭೂತ ಸೌಕರ್ಯ ಸಮರ್ಪಕವಾಗಿರುವಂತೆ ನಿಗಾ ವಹಿಸಬೇಕು.

ಇಓ, ಚೀಫ್ ಆಫೀಸರ್, ಪಿಡಿಓ ಗಳು ಎಲ್ಲ ಮತಗಟ್ಟೆಗಳಲ್ಲಿ ಎಎಂಎಫ್(ಅಶ್ಯೂರಡ್ ಮಿನಿಮಮ್ ಫೆಸಿಲಿಟಿಸ್) ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸಬೇಕು. ಹಾಗೂ ಚುನಾವಣಾಧಿಕಾರಿಗಳು ಪೋಸ್ಟಲ್ ಬ್ಯಾಲಟ್ ಬಗ್ಗೆ ಅತ್ಯಂತ ಸೂಕ್ಷ್ಮವಾಗಿ ಕಾರ್ಯ ನಿರ್ವಹಿಸಬೇಕೆಂದರು.

ನಾಮಪತ್ರ ಸಲ್ಲಿಕೆಗೆ ಅಗತ್ಯವಾದ ತಯಾರಿಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ನಾಮಪತ್ರ ಸ್ವೀಕರಿಸುವ ಕುರಿತು ಚುನಾವಣಾಧಿಕಾರಿಗಳು ನಿಯಮಗಳು, ಮಾರ್ಗಸೂಚಿಗಳನ್ನು ಮತ್ತೊಮ್ಮೆ ಓದಿ, ತಿಳಿದುಕೊಂಡು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಬೇಕು. ಮಸ್ಟರಿಂಗ್ ಕೇಂದ್ರಗಳು ಹಾಗೂ ಇದಕ್ಕೆ ಸಂಬಂಧಿಸಿದ ಸಿಬ್ಬಂದಿಗಳು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಮತದಾರರ ಗುರುತಿನ ಚೀಟಿಗಳ ವಿತರಣೆಯನ್ನು ಸಮರ್ಪಕವಾಗಿ ಮಾಡಬೇಕು. ಹೊಸ ಹಾಗೂ ಉಳಿದ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ವಿತರಿಸಲು ಶೀಘ್ರವೇ ಕ್ರಮ ಜರುಗಿಸುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಲೋಖಂಡೆ, ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿಎಸ್‍ಟಿ ಮತ್ತು ಇತರೆ ತಂಡಗಳು ತಮ್ಮ ತಮ್ಮ ಕರ್ತವ್ಯವನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಮತದಾನ ಜಾಗೃತಿಗಾಗಿ ಎಲ್ಲ ಹಳ್ಳಿಗಳಲ್ಲಿ ಕಸ ಸಂಗ್ರಹ ವಾಹನಗಳಲ್ಲಿ ಮತದಾನ ಮಹತ್ವ-ಅರಿವು ಮೂಡಿಸುವ ಜಿಂಗಲ್‍ಗಳನ್ನು ಹಾಕಬೇಕು ಹಾಗೂ ಸ್ವೀಪ್ ಚಟುವಟಿಕೆಗಳನ್ನು ಸಕ್ರಿಯಗೊಳಿಸಿ ಮತದಾನ ಜಾಗೃತಿ ಮೂಡಿಸಬೇಕು. ಕಳೆದ ಬಾರಿ ಕಡಿಮೆೋ ಮತದಾನ ಆದ ಮತಕ್ಷೇತ್ರಗಳಲ್ಲಿ ಹೆಚ್ಚಿನ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ದಲ್ಜೀತ್ ಕುಮಾರ್, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್, ಚುನಾವಣಾ ನಿಯೋಜಿತ ಅಧಿಕಾರಿಗಳು ಹಾಜರಿದ್ದರು.