ಸುಬ್ರಹ್ಮಣ್ಯದ ಅಜಿತೇಶ್ ಭೂಸೇನೆಯ ಲೆಫ್ಟಿನೆಂಟ್ ಆಗಿ ಆಯ್ಕೆ
ಸುಬ್ರಹ್ಮಣ್ಯ : ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ವಿದ್ಯಾರತ್ನ ಹಾಗೂ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಶ್ರೀಕೃಷ್ಣ ಶರ್ಮ ಪಿ. ಅವರ ಪುತ್ರರಾಗಿರುವ ಅಜಿತೇಶ್ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ, ಫಾರೆಸ್ಟರಿಯಲ್ಲಿ ಬಿ.ಎಸ್ಸಿ ಪದವಿಯನ್ನು ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಪಡೆದಿದ್ದಾರೆ.