ಸುವರ್ಣಸೌಧದ ಎದುರು ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಪ್ರತಿಮೆ ಸ್ಥಾಪನೆ : ಸಿಎಂ ಘೋಷಣೆ

ಸುವರ್ಣಸೌಧದ ಎದುರು ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಪ್ರತಿಮೆ ಸ್ಥಾಪನೆ : ಸಿಎಂ ಘೋಷಣೆ

ಬೆಳಗಾವಿ: ಮುಂದಿನ ವಾರ ಸುವರ್ಣ ಸೌಧದ ಎದುರು ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ಚನ್ನಮ್ಮ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು. ನಗರದಲ್ಲಿ ಮಾತನಾಡಿದ ಅವರು, ಸುವರ್ಣಸೌಧದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ & ಮಹಾತ್ಮಾ ಗಾಂಧಿಜೀಯವರ ಮೂರ್ತಿಗಳನ್ನೂ ಸ್ಥಾಪನೆ ಮಾಡಲಾಗುವುದು. ಚೆನ್ನಮ್ಮ ವಿವಿ ಮುಂದೆ ರಾಣಿ ಚೆನ್ನಮ್ಮ ಮೂರ್ತಿ ಸ್ಥಾಪನೆ ಮಾಡಲು ಅನುದಾನ ನೀಡಲಾಗುವುದು ಎಂದರು.