ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣ : ಸಿಎಂ ಬೊಮ್ಮಾಯಿ

ಬೆಂಗಳೂರು : ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ನಿನ್ನೆ ನಗರದ ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 191ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.
ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹಾಗೂ ಸುಬಾಷ್ ಚಂದ್ರ ಬೋಸ್ ಭಾವಚಿತ್ರ ಅಳವಡಿಕೆ ಮಾಡಬೇಕು ಹಾಗೂ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದರು. ಬೆಳಗಾವಿ ಸುವರ್ಣಸೌಧಆವರಣದಲ್ಲಿ ಚೆನ್ನಮ್ಮಹಾಗೂ ರಾಯಣ್ಣನ ಪ್ರತಿಮೆ ನಿರ್ಮಿಸಲಾಗುವುದು. ಈ ಸಂಬಂಧ ಮೂರ್ತಿ ತಯಾರಕರ ಜತೆ ಮಾತುಕತೆ ನಡೆಸಿದ್ದೇವೆ ಎಂದರು.
ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಕೆ ಮಾಡಬೇಕು, ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಅಂದಾಜು 180 ಕೋಟಿ ರು. ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಸರ್ಕಾರ ಸ್ಥಾಪಿಸುವ ಉದ್ದೇಶ ಹೊಂದಿದೆಎಂದು ಸಿಎಂ ಬೊಮ್ಮಾಯಿ ಹೇಳಿದರು.
ನಮ್ಮ ದೇಶ ನಡೆದು ಬಂದ ದಾರಿ ಹಾಗೂ ನಾವು ಮುಂದೆ ಸಾಗಬೇಕಾದ ದಾರಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಕಾಲ ಎಂದು ಮುಖ್ಯಮಂತ್ರಿ ಬಸವರಾಜ ಬಪಮ್ಮಾಯಿ ಹೇಳಿದರು. ಅವರು ನಿನ್ನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ನಾವೆಲ್ಲ ಸ್ವಾತಂತ್ರ್ಯ ಬಂದ ಮೇಲೆ ಹುಟ್ಟಿದವರು, ನಮಗೆ ಸ್ವಾತಂತ್ರ್ಯ ದ ಮಹತ್ವ ಎಷ್ಟು ಇದೆಯೊ ಗೊತ್ರಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ಇದ್ದವರಿಗೆ ಅದರ ಗಾಂಭಿರ್ಯತೆ ಗೊತ್ತಿತ್ತು. ನಮ್ಮ ದೇಶದ ಇತಿಹಾಸ, ಪರಂಪರೆ ತಿಳಿದುಕೊಂಡಾಗ ನಾವು ಯಾರು ಎಂದು ತಿಳಿಯುತ್ತದೆ. ಈ ದೇಶಕ್ಕಾಗಿ ಹಾಗೂ ಸ್ವಂತಕ್ಕಾಗಿ ನಾನು ಏನು ಮಾಡಬಲ್ಲೆ ಎನ್ನುವುದನ್ನು ತಿಳಿಯಬೇಕಿದೆ. ಯಾಕೆಂದರೆ ಪ್ರತಿಯೊಬ್ಬರ ಸ್ವಂತ ಸಾಧನೆ ದೇಶದ ಸಾಧನೆಗೆ ಜೋಡಣೆ ಆಗುತ್ತದೆ ಎಂದು ಹೇಳಿದರು.