ಸೇನೆ ಸೇರಬಯಸುವವರಿಗೆ ಶುಭಸುದ್ದಿ : 'ಅಗ್ನಿಪಥ್' ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಭಾರತೀಯ ವಾಯುಪಡೆಯ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ನೊಂದಣಿಗೆ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆಯು ದ್ವಿತೀಯ ಪಿ.ಯು.ಸಿಯಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ. 08392-273988 ಅಥವಾ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.