ಸ್ಥಾನಕ್ಕೆ ತಕ್ಕ ನ್ಯಾಯ ದೊರಕಿಸಿಕೊಡುವೆ: ಚನಿಲ ತಿಮ್ಮಪ್ಪಶೆಟ್ಟಿ

ಮಂಗಳೂರು: ತನಗೆ ದೊರೆತ ಸ್ಥಾನಕ್ಕೆ ತಕ್ಕಂತೆ ಉತ್ತಮವಾಗಿ ಕೆಲಸ ಮಾಡಿ ಸೂಕ್ತ ನ್ಯಾಯ ಒದಗಿಸುವ ಪ್ರಯತ್ನ ಮಾಡುವುದಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಚನಿಲ ತಿಮ್ಮಪ್ಪಶೆಟ್ಟಿ ತಿಳಿಸಿದರು.
ನಗರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸರಕಾರ ನನ್ನ ಮೇಲೆ ವಿಶ್ವಾಸವಿರಿಸಿ ದೊಡ್ಡ ಜವಾಬ್ದಾರಿ ನೀಡಿದೆ. ಆ ಹುದ್ದೆಗೆ ತಕ್ಕ ನ್ಯಾಯ ದೊರಕಿಸಲು ಶ್ರಮಿಸುತ್ತೇನೆ.ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರು ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಅವುಗಳನ್ನು ಪೂರ್ಣಗೊಳಿಸುತ್ತೇನೆ ಎಂದರು.
ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮುಖಂಡರಾದ ಸಂತೋಷ್ ಬೋಳಿಯಾರ್, ಪುತ್ತೂರು ನಗರ ಸಭಾಧ್ಯಕ್ಷೆ ಇಂದಿರಾ ಎಸ್., ಉಪಾಧ್ಯಕ್ಷೆ ಪರಮೇಶ್ವರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ ಉಪಸ್ಥಿತರಿದ್ದರು.