ಕ್ಯಾಲಿಫೋರ್ನಿಯಾದಲ್ಲಿ ಸಾಮೂಹಿಕ ಗುಂಡಿನ ದಾಳಿ ; ಸ್ವಯಂ ಪ್ರೇರಿತ ಗುಂಡೇಟಿನಿಂದ ಶಂಕಿತನೂ ಸಾವು

ಕ್ಯಾಲಿಫೋರ್ನಿಯಾದಲ್ಲಿ ಸಾಮೂಹಿಕ ಗುಂಡಿನ ದಾಳಿ ; ಸ್ವಯಂ ಪ್ರೇರಿತ ಗುಂಡೇಟಿನಿಂದ ಶಂಕಿತನೂ ಸಾವು

ಕ್ಯಾಲಿಫೋರ್ನಿಯಾ : ಕ್ಯಾಲಿಫೋರ್ನಿಯಾದ ಮಾಂಟೆರಿ ಪಾರ್ಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ಶಂಕಿತ ಆರೋಪಿಯೂ ಸಹ ಸಾವನ್ನಪ್ಪಿದ್ದಾನೆ ಎಂದು ಲಾಸ್ ಏಂಜಲೀಸ್ ಕೌಂಟಿ ಶೆರಿಫ್ ರಾಬರ್ಟ್ ಲೂನಾ ಮಾಹಿತಿ ನೀಡಿದ್ದಾರೆ.

ಶಂಕಿತ ವ್ಯಕ್ತಿಯನ್ನು 72 ವರ್ಷದ ಹುಯು ಕ್ಯಾನ್ ಟ್ರಾನ್ ಎಂದು ಗುರುತಿಸಲಾಗಿದ್ದು, ಆತ ಸ್ವಯಂ ಪ್ರೇರಿತ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎಂದು ಲೂನಾ ಹೇಳಿದ್ದಾರೆ.

ಲಾಸ್ ಏಂಜಲೀಸ್ ಸಮೀಪದ ಮಾಂಟೆರಿ ಪಾರ್ಕ್ ನಲ್ಲಿ ರಾತ್ರಿ 10 ಗಂಟೆಯ ನಂತರ ಈ ಗುಂಡಿನ ದಾಳಿ ನಡೆದಿದೆ. ಘಟನೆ ಕುರಿತಾದ ವಿಡಿಯೋಗಳು ಸಾಮಾಜಿಕ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಗಾರ್ವೆ ಅವೆನ್ಯೂ ಪ್ರದೇಶದಲ್ಲಿ ಗಾಯಾಳುಗಳನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯುತ್ತಿರುವುದನ್ನು ನೋಡಬಹುದು.

ಎರಡು ದಿನಗಳ ಮಾಂಟೆರಿ ಪಾರ್ಕ್ ಹೊಸ ವರ್ಷದ ಉತ್ಸವಕ್ಕಾಗಿ ಸಾವಿರಾರು ಜನರು ಶನಿವಾರ ಮಧ್ಯಾಹ್ನ ಜಮಾಯಿಸಿದ್ದರು ಎಂದು ತಿಳಿದು ಬಂದಿದೆ.